ಮಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡದಲ್ಲಿ ಕಳೆದ ಕೆಲವು ದಿನಗಳಿಂದ ಹಗಲು ಹೊತ್ತು ಪ್ರಖರ ಬಿಸಿಲು, ರಾತ್ರಿ ವೇಳೆ ಅಲ್ಲಲ್ಲಿ ಮಳೆ ಸುರಿಯುತ್ತಿದ್ದು, ವಿಚಿತ್ರ ರೀತಿಯ ಹವಾಮಾನ ಪರಿಸ್ಥಿತಿ ಇದೆ. ಬಿಸಿಲಿನ ತಾಪಕ್ಕೆ ಒತ್ತಡ ಹೆಚ್ಚಾಗಿ ಸೆಖೆ ಹೆಚ್ಚಾಗುತ್ತಿದೆ. ಹಾಗೆಯೇ ರಾತ್ರಿ ವೇಳೆ ಕರಾವಳಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂದಿನ ಒಂದು ವಾರಗಳ ಕಾಲ ರಾಜ್ಯದ ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿರುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ.