ಶಿರ್ಲಾಲು : ಗ್ರಾ. ಪಂ. ಮಕ್ಕಳ ಮತ್ತು ಮಹಿಳಾ ವಿಶೇಷ ಗ್ರಾಮ ಸಭೆಯು ಸೂಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎ. 5 ರಂದು ಬೆಳಿಗ್ಗೆ 10.00 ಗಂಟೆಗೆ ಜರುಗಿತು. ಈ ಸಂದರ್ಭದಲ್ಲಿ ಮಕ್ಕಳ ಪೌಷ್ಠಿಕತೆ, ಮಹಿಳಾ ಮತ್ತು ಮಕ್ಕಳ ಆರೋಗ್ಯ, ಹದಿಹರೆಯದ ಸಮಸ್ಯೆಗಳು, ಮಹಿಳೆ ಮತ್ತು ಕಾನೂನು ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ, ಆರ್ಥಿಕ ಸಬಲೀಕರಣ ಹಾಗೂ ಕೌಟುಂಬಿಕ ದೌರ್ಜನ್ಯ ತಡೆಗಟ್ಟುವ ವಿಚಾರವಾಗಿ ಮಾಹಿತಿ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ. ಪಂ. ಅಧ್ಯಕ್ಷ ರಮಾನಂದ ಪೂಜಾರಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ನ್ಯಾಯವಾದಿ ಸೂರಜ್ ಜೈನ್, ಸಂಜೀವಿನಿ ಒಕ್ಕೂಟದ ಸಂಪನ್ಮೂಲ ವ್ಯಕ್ತಿ, ಆರೋಗ್ಯ ಇಲಾಖೆ ಹಾಗೂ ಆಶಾ ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಮುಖ್ಯೋಪಾಧ್ಯಾಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಶಾಲಾ ಮಕ್ಕಳು, ಗ್ರಾಮಸ್ಥರು, ಗ್ರಾ. ಪಂ. ಸದಸ್ಯರುಗಳು, ಪೊಲೀಸ್ ಇಲಾಖಾ ಅಧಿಕಾರಿಗಳು, ಗ್ರಾ. ಪಂ. ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಹಾಗೂ ಪಂಚಾಯತ್ ನ ಎಲ್ಲಾ ಸಿಬ್ಬಂದಿ ಉಪಸ್ಥಿತರಿದ್ದರು.
Recent Comments
ಕಗ್ಗದ ಸಂದೇಶ
on