ಮಾನಸಿಕ ಖಿನ್ನತೆಯಿಂದ ಯುವಕ ಆತ್ಮಹತ್ಯೆ
ಹೆಬ್ರಿ : ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಎ. 6 ರಂದು ಶಿವಪುರ ಗ್ರಾಮದಲ್ಲಿ ನಡೆದಿದೆ.
ದೀಕ್ಷಿತ್ (27) ಮೃತ ದುರ್ದೈವಿಯಾಗಿದ್ದಾರೆ. ಕಳೆದ ಹಲವಾರು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದ ಅವರು ಬೆಳಗ್ಗೆ ಕೋಣೆಯಲ್ಲಿನ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆ ಕೂಡಲೇ ಮನೆಯವರು ದೀಕ್ಷಿತ್ ಅವರನ್ನು ಹೆಬ್ರಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಪರೀಕ್ಷೆ ನಡೆಸಿದ ವೈದ್ಯರು ಅವರು ಮೃತಪಟ್ಟಿರುವುದನ್ನು ಖಾತ್ರಿ ಪಡಿಸಿದ್ದಾರೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು – ಟಿಪ್ಪರ್ ಡಿಕ್ಕಿ, ಕಾರು ಜಖಂ
ಸಾಣೂರು : ಕಾರಿಗೆ ಟಿಪ್ಪರ್ ಡಿಕ್ಕಿಯಾಗಿ ಕಾರು ಜಖಂಗೊಂಡ ಘಟನೆ ಎ. 6 ರಂದು ಗ್ರಾಮದ ಸೇತುವೆ ಬಳಿ ನಡೆದಿದೆ.
ಎಸ್.ಎನ್. ಪುರುಷೋತ್ತಮ(62) ತಮ್ಮ ಕಾರಿನಲ್ಲಿ ಹೆಂಡತಿ ಮತ್ತು ಕಾರು ಚಾಲಕನೊಂದಿಗೆ ಮೂಡುಬಿದ್ರೆಯ ಕಡೆಗೆ ಸಾಗುತ್ತಿದ್ದಾಗ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿಯಾಗಿದೆ. ಪರಿಣಾಮ ಕಾರಿನ ಹಿಂಭಾಗ ಜಖಂಗೊಂಡಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.