ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ನಾಯಕರಿಗೆ ವಿವಿಧ ಕಾರ್ಯಗಳನ್ನು ನಿಯೋಜಿಸಿದ್ದಾರೆ ಮತ್ತು ಕರ್ನಾಟಕದ 75 ಕೆರೆಗಳನ್ನು ಅಭಿವೃದ್ಧಿಪಡಿಸಲು ನನಗೆ ಸೂಚನೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದಲ್ಲೇ ಕೋಲಾರದಲ್ಲಿ ಕೆರೆಗೆಳ ಅಭಿವೃದ್ಧಿಯ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ ಎಂದರು. ದೇಶದ 75ನೇ ಸ್ವಾತಂತ್ರ್ಯದ ‘ಆಜಾದಿ ಕಾ ಅಮೃತ ಮಹೋತ್ಸವ’ ನಿಮಿತ್ತ ರಾಜ್ಯದಲ್ಲಿ 75 ಕೆರೆಕಟ್ಟೆಗಳನ್ನು ಅಭಿವೃದ್ಧಿಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.