Saturday, May 21, 2022
spot_img
Homeಸ್ಥಳೀಯ ಸುದ್ದಿಎ.7: ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಬಿಎಸ್ಸಿ ನರ್ಸಿಂಗ್‌ಗೆ ನೇರ ಪ್ರವೇಶಾತಿ

ಎ.7: ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಬಿಎಸ್ಸಿ ನರ್ಸಿಂಗ್‌ಗೆ ನೇರ ಪ್ರವೇಶಾತಿ

ಕಾರ್ಕಳ : ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ 2021-22ನೇ ಸಾಲಿನಲ್ಲಿ ಪ್ರಾರಂಭಿಸಲಾದ ಸರಕಾರಿ ಶುಶ್ರೂಷಾ ಮಹಾವಿದ್ಯಾಲಯದಲ್ಲಿ(B Sc Nursing College) ಲಭ್ಯವಿರುವ 04 ಸೀಟುಗಳಿಗೆ (3ಬಿಜಿ-01, 3ಎಜಿ-01, ಜಿಎಮ್-02) ನೇರ ನೇಮಕಾತಿ ನಡೆಯಲಿದೆ.
ಕೆಇಎ ಮುಖಾಂತರ ಬಿಎಸ್ಸಿ ನರ್ಸಿಂಗ್ ಕೋರ್ಸಿಗೆ ಅರ್ಜಿ ಸಲ್ಲಿಸಿ, ಇದುವರೆಗೂ ಯಾವುದೇ ಕಾಲೇಜಿನಲ್ಲಿ ಸೀಟು ಸಿಗದಂತಹ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಎ. 7 ರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನೇರ ಸಂದರ್ಶನ ನಡೆಯಲಿದೆ.
ಮೆರಿಟ್ ಆಧಾರದಲ್ಲಿ, ಆಯಾ ಮೀಸಲಾತಿ ಅನುಸಾರ ಬಿಎಸ್ಸಿ ನರ್ಸಿಂಗ್ ಕೊರ್ಸಿಗೆ ಸೀಟು ಹಂಚಿಕೆ ಮಾಡಲಾಗುವುದು. ವಿದ್ಯಾರ್ಥಿಗಳು ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬೇಕೆಂದು ಕಾಲೇಜು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!