ಉಡುಪಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎ.11ರಂದು ಜಿಲ್ಲೆಗೆ ಭೇಟಿ ನೀಡಲಿದ್ದು, ಹಲವಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಎ.11ರ ಮಧ್ಯಾಹ್ನ 12 ಗಂಟೆಗೆ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 2.30 ಕ್ಕೆ ಉಡುಪಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಿ, ಗ್ರಂಥಾಲಯದಲ್ಲಿ ಬನ್ನಂಜೆ ಗೋವಿಂದಾಚಾರ್ಯರ ಪ್ರತಿಮೆ ಅನಾವರಣಗೊಳಿಸಲಿದ್ದಾರೆ.
ಅಪರಾಹ್ನ 3.30 ಕ್ಕೆ ಬನ್ನಂಜೆಯಲ್ಲಿ ನೂತನವಾಗಿ ನಿರ್ಮಾಣವಾದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಉದ್ಘಾಟಿಸಲಿದ್ದು, ನಂತರ ನಡೆಯುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಪಘಾತ ರಹಿತ ಬಸ್ ಚಾಲನೆ ಮಾಡಿದ ಚಾಲಕರಿಗೆ ಪ್ರಶಸ್ತಿ ವಿತರಣೆ ಮಾಡಲಿದ್ದಾರೆ. 5.30 ಕ್ಕೆ ಸಗ್ರಿ ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಎ. 11: ಜಿಲ್ಲೆಗೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ
Recent Comments
ಕಗ್ಗದ ಸಂದೇಶ
on