Thursday, May 26, 2022
spot_img
Homeರಾಜ್ಯಬೆಂಗಳೂರಿನ ಐದು ಖಾಸಗಿ ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ : ಪೊಲೀಸರಿಂದ ಶೋಧ

ಬೆಂಗಳೂರಿನ ಐದು ಖಾಸಗಿ ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ : ಪೊಲೀಸರಿಂದ ಶೋಧ

ಬೆಂಗಳೂರು: ರಾಜ್ಯಾದ್ಯಂತ ಧರ್ಮ ಸಂಘರ್ಷಣೆ ನಡುವೆಯೇ ರಾಜಧಾನಿ ಬೆಂಗಳೂರು ನಾಗರಿಕರು ಬೆಚ್ಚಿಬೀಳುವ ಆಘಾತಕಾರಿ ಮಾಹಿತಿ ಶುಕ್ರವಾರ ಹೊರಬಿದ್ದಿದೆ. ಬೆಂಗಳೂರಿನ ನಾಲ್ಕು ಕಡೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಿಕ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದೆ.

ಖುದ್ದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಇಂದು ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ಸೂಳಕುಂಟೆಯ ಡೆಲ್ಲಿ ಪಬ್ಲಿಕ್ ಸ್ಕೂಲ್ ಸೇರಿದಂತೆ ನಾಲ್ಕು ಶಾಲೆಗಳನ್ನು ಗುರಿಯಾಗಿಟ್ಟುಕೊಂಡು ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇಮೇಲ್ ಬಂದಿದ್ದು, ಪೊಲೀಸರು ಕೂಲಂಕಷವಾಗಿ ತನಿಖೆ ಮಾಡುತ್ತಿದ್ದಾರೆ. ಇಮೇಲ್ ಆಧರಿಸಿ ಹೆಣ್ಣೂರು ಮತ್ತು ಹೆಬ್ಬುಗೋಡಿಯ ಖಾಸಗಿ ಶಾಲೆಗಳಿಗೆ ಬಾಂಬ್ ಸ್ಕ್ವಾಡ್, ಶ್ವಾನ ದಳ ಮೂಲಕ ತೆರಳಿ ಪರಿಶೀಲನೆ ನಡೆಸಲಾಗುತ್ತಿದೆ. ಈಗಾಗಲೇ ಶಾಲೆಗಳಿಂದ ಸಿಬ್ಬಂದಿಗಳನ್ನು ಹೊರಗೆ ಕಳುಹಿಸಲಾಗಿದೆ ಎಂದು ಕಮಲ್ ಪಂತ್ ಮಾಹಿತಿ ನೀಡಿದ್ದಾರೆ.

ಇದುವರೆಗೆ ಶಾಲೆಗಳಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಮಾಹಿತಿ, ಸುಳಿವು ಸಿಕ್ಕಿಲ್ಲ, ಹಾಗೆಂದು ಈ ವಿಷಯದಲ್ಲಿ ನಿರ್ಲಕ್ಷ್ಯ ಮಾಡುವಂತಿಲ್ಲ ಎಂದಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!