ಬೆಂಗಳೂರು: ರಾಜ್ಯದಲ್ಲಿ ಇನ್ನೇನು ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ವಿದ್ಯಾರ್ಥಿಗಳು ಕಡ್ಡಾಯವಾಗಿ ಸಮವಸ್ತ್ರವನ್ನೇ ಧರಿಸಿ ಪರೀಕ್ಷೆಗೆ ಹಾಜರಾಗುವಂತೆ ಪಿಯುಸಿ ಬೋರ್ಡ್ ಆದೇಶಿಸಿದೆ.
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿ ಮಾಡಿದ ಸಮವಸ್ತ್ರವನ್ನೇ ಕಡ್ಡಾಯವಾಗಿ ಧರಿಸಬೇಕು. ಹಾಗೆಯೇ ಖಾಸಗಿ ವಿದ್ಯಾಸಂಸ್ಥೆಗಳಿಗೆ ಸಂಬಂಧಿಸಿದಂತೆ ಆಡಳಿತ ಮಂಡಳಿ ನಿಗದಿ ಮಾಡಿರುವ ಯೂನಿಫಾರ್ಮ್ಗಳನ್ನೇ ತೊಟ್ಟು ಪರೀಕ್ಷೆ ಬರೆಯುವಂತೆ ಸೂಚಿಸಲಾಗಿದೆ.
ಕಳೆದ 15 ಮಾರ್ಚ್ 2022 ರಂದು ಹೈಕೋರ್ಟ್ ನೀಡಿರುವ ಆದೇಶದ ಅನುಸಾರವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ದಿನಾಂಕ 22 ಎಪ್ರಿಲ್ 2022 ರಿಂದ 18 ಮೇ 2022 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ.
ಪಿಯುಸಿ ಪರೀಕ್ಷೆ ಬರೆಯಲು ಸಮವಸ್ತ್ರ ಕಡ್ಡಾಯ: ಪಿಯುಸಿ ಬೋರ್ಡ್
Recent Comments
ಕಗ್ಗದ ಸಂದೇಶ
on