ಉತ್ತರ ಕನ್ನಡ: ಹಿಜಾಬ್ ಹೋರಾಟದ ಸಂದರ್ಭದಲ್ಲಿ ಅಲ್ಲಾ ಹೋ ಅಕ್ಬರ್ ಎಂದು ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್ ಳನ್ನು ತನಿಖೆಗೆ ಒಳಪಡಿಸಬೇಕೆಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಸಂಸದ ಅನಂತ ಕುಮಾರ್ ಹೆಗಡೆ ಪತ್ರ ಬರೆದಿದ್ದಾರೆ.
ಈ ಹಿಂದೆ ಮಂಡ್ಯದ ಪಿ.ಇ.ಎಸ್ ಕಾಲೇಜಿನ ವಿದ್ಯಾರ್ಥಿಗಳು ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾಗ, ಬೀಬಿ ಮುಸ್ಕಾನ್ ಎಂಬ ಬುರ್ಖಾಧಾರಿ ವಿದ್ಯಾರ್ಥಿನಿಯು ‘ಅಲ್ಲಾ ಹೂ ಆಕ್ಟರ್’ ಎಂದು ಕೂಗಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಲೇ, ಈ ವಿದ್ಯಾರ್ಥಿನಿಗೆ ಹಲವಾರು ಮುಸ್ಲಿಂ ಸಂಘಟನೆಗಳಿಂದ ಪ್ರಶಂಸೆಯ ನುಡಿಗಳು ಹಾಗೂ ಬಹುಮಾನಗಳ ಘೋಷಣೆ ಮಾಡಲಾಗಿತ್ತು. ಹೀಗಿರುವಾಗ ನಿಷೇಧಿತ ಮುಸ್ಲಿಂ ಭಯೋತ್ಪಾದಕ ಸಂಘಟನೆ ಆಲ್-ಖೈದಾದ ಮುಖ್ಯಸ್ಥ ಆಯಮನ್-ಅಲ್-ಜವಾಹರಿ ಇತ್ತೀಚೆಗೆ ಈ ವಿದ್ಯಾರ್ಥಿನಿಯ ಕುರಿತು ‘ಭಾರತದ ಸರ್ವಶ್ರೇಷ್ಠ ಮಹಿಳೆ’ ಎಂದು ಹೊಗಳುತ್ತಿರುವ ವಿಡಿಯೋ ಚರ್ಚೆಗೆ ಕಾರಣವಾಗಿದೆ.
ಕರ್ನಾಟಕ ಹೈಕೋರ್ಟ್ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿ ತೀರ್ಪು ನೀಡಿದ್ದರೂ ಸಹಿತ ಹಲವಾರು ರಾಜಕಾರಣಿಗಳು, ಮೂಲಭೂತವಾದಿ ಸಂಘಟನೆಗಳು ಹಾಗೂ ವಿದ್ಯಾರ್ಥಿನಿಯರು ಉಚ್ಛ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಾರೆ. ಹಿಜಾಬ್ ಪ್ರತಿಭಟನೆಯ ಹಿಂದೆ ಕಾಣದ ಕೈಗಳ ಕೈವಾಡವಿದೆ ಎಂದು ಉಚ್ಛ ನ್ಯಾಯಲಯ ಪೀಠವು ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಕುರಿತಂತೆ ಕೂಲಂಕುಷವಾದ ತನಿಖೆ ನಡೆಸಬೇಕು’ ಎಂದು ಪತ್ರದಲ್ಲಿ ಮುಖ್ಯಮಂತ್ರಿಗೆ ಸಂಸದ ಅನಂತಕುಮಾರ ಹೆಗಡೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ವಿದ್ಯಾರ್ಥಿನಿ ಮುಸ್ಕಾನ್ ವಿರುದ್ಧ ತನಿಖೆ ನಡೆಸಿ : ಸಿಎಂಗೆ ಸಂಸದ ಅನಂತ್ ಕುಮಾರ್ ಹೆಗಡೆ ಪತ್ರ
Recent Comments
ಕಗ್ಗದ ಸಂದೇಶ
on