ಕಾಪು : ಮೊಗವೀರರು ಶ್ರಮ ಜೀವಿಗಳು ಮತ್ತು ಕರಾವಳಿ ಪ್ರದೇಶಗಳಲ್ಲಿ ಮೊಗವೀರರ ಸೇವೆಗಳು ಅಪಾರ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.
ಎ. 11ರಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರಕಾರದ ಸಹಕಾರ ಮತ್ತು ಸಮಾಜ ಬಾಂಧವರ ಒಗ್ಗಟ್ಟಿನ ಫಲವಾಗಿ ಇಂದು ಮಹಾಲಕ್ಷ್ಮೀ ದೇವಸ್ಥಾನ ನಿರ್ಮಾಣಗೊಂಡಿದೆ. ಡಾ. ಜಿ. ಶಂಕರ್ ನೇತೃತ್ವದಲ್ಲಿ ದ.ಕ. ಮೊಗವೀರ ಮಹಾಜನ ಸಂಘ ಸಹಿತವಾಗಿ ಮೊಗವೀರ ಸಮುದಾಯದ ಬೇಡಿಕೆಯಂತೆ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಮುಂದುವರೆದ ಜೀರ್ಣೋದ್ಧಾರ ಕಾಮಗಾರಿಗಾಗಿ 5 ಕೋಟಿ ರೂ. ಅನುದಾನ ಹಾಗೂ ವಿದ್ಯಾರ್ಥಿ ನಿಲಯ ಸ್ಥಾಪನೆ, ಮೊಗವೀರ ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ, ಡೀಸೆಲ್ ಸಬ್ಸಿಡಿ ಮತ್ತು ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಅವರು ಭರವಸೆ ನೀಡಿದರು.
ಕರಾವಳಿಯಲ್ಲಿ ಮೊಗವೀರರ ಸೇವೆ ಅಪಾರ : ಸಿಎಂ ಬೊಮ್ಮಾಯಿ
Recent Comments
ಕಗ್ಗದ ಸಂದೇಶ
on