ಟೆಂಪೋ – ಸ್ಕೂಟರ್ ಡಿಕ್ಕಿ : ಸವಾರ ಸಾವು

ಕಾರ್ಕಳ : ಟೆಂಪೋ ಮತ್ತು ಸ್ಕೂಟರ್ ಮುಖಾಮುಖಿ ಡಿಕ್ಕಿಯಾಗಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ತಾಲ್ಲೂಕಿನ ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.

ಸ್ಕೂಟರ್ ಸವಾರ ಸಚ್ಚೇರಿಪೇಟೆಯ ನಿವಾಸಿ ದೈವ ನರ್ತಕ ಗೋಪಾಲಕೃಷ್ಣ (38`) ಮೃತಪಟ್ಟವರು. ಮುಂಡ್ಕೂರು ಕಡೆಯಿಂದ ಮೂಡಬಿದ್ರೆಗೆ ತೆರಳುತ್ತಿದ್ದ ತರಕಾರಿ ಸಾಗಾಟದ ಟೆಂಪೊವೊಂದು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಅದರ ಪರಿಣಾಮ ಸ್ಕೂಟರ್ ಸವಾರ ಗೋಪಾಲಕೃಷ್ಣ ರಸ್ತೆಗೆ ಎಸೆಯಲ್ಪಟ್ಟು, ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಕಿನ್ನಿಗೋಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಾಳುವನ್ನು ಪರೀಕ್ಷಿಸಿದ ವೈದ್ಯರು ಗಾಯಾಲು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ









































































































































































error: Content is protected !!
Scroll to Top