Tuesday, May 17, 2022
spot_img
Homeಜಿಲ್ಲಾಭವಿಷ್ಯದಲ್ಲಿ ಉಡುಪಿ ಜಿಲ್ಲೆಯ ಸಮಗ್ರ ಅಭಿವೃದ್ಧಿ : ಸಿಎಂ ಬೊಮ್ಮಾಯಿ

ಭವಿಷ್ಯದಲ್ಲಿ ಉಡುಪಿ ಜಿಲ್ಲೆಯ ಸಮಗ್ರ ಅಭಿವೃದ್ಧಿ : ಸಿಎಂ ಬೊಮ್ಮಾಯಿ

ಉಡುಪಿ : ಮುಂಬರುವ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಬೀಚ್ ಟೂರಿಸಂ ಹಾಗೂ ಟೆಂಪಲ್ ಟೂರಿಸಂ ಅಭಿವೃದ್ಧಿಯಾಗಲಿದೆ. ಕರಾವಳಿ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಯಾಗಲು ಸಿಆರ್‌ಝೆಡ್ ನಿಯಮಾವಳಿಗಳು ಬದಲಾಯಿಸುವ ಬಗ್ಗೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಲಾಗಿದ್ದು, ಸೂಕ್ತ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಕರ್ನಾಟಕ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದ ವತಿಯಿಂದ ನೂತನವಾಗಿ ನಿರ್ಮಿಸಿರುವ ಡಾ. ವಿ.ಎಸ್. ಆಚಾರ್ಯ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದರು.

ಉಡುಪಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ
ಉಡುಪಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಸರ್ಕಾರದ ಆದ್ಯತೆಯಾಗಿದ್ದು, 250 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಪಿಪಿಪಿ ಮಾದರಿಯಲ್ಲಿ ಮೆಡಿಕಲ್ ಕಾಲೇಜು ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. 200 ಹಾಸಿಗೆ ಸಾಮರ್ಥ್ಯದ ಸುಸಜ್ಜಿತವಾದ ತಾಯಿ ಮಕ್ಕಳ ಆಸ್ಪತ್ರೆಯ ನಿರ್ಮಾಣ ಕೈಗೊಳ್ಳಲಾಗುತ್ತಿದೆ. ಕುಡಿಯುವ ನೀರು ಹಾಗೂ ಒಳಚರಂಡಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಮೀನುಗಾರಿಕೆ, ಪ್ರವಾಸೋದ್ಯಮಗಳಿಗೆ ಸದಾ ಪ್ರೋತ್ಸಾಹ ನೀಡಲಿದ್ದು, ಕರಾವಳಿ ಭಾಗದ ಜನರ ಆರ್ಥಿಕ ಪರಿಸ್ಥಿತಿ ಉತ್ತಮಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ತಿಳಿಸಿದರು.

ಬಸ್ ನಿಲ್ದಾಣದಲ್ಲಿ ಸಮಯ ಪರಿಪಾಲನೆ, ಸ್ವಚ್ಛತೆಗೆ ಆದ್ಯತೆ

ಸಾರಿಗೆ ಸೇವೆಯಲ್ಲಿ ಸಮಯ ಮತ್ತು ಬದ್ಧತೆ ಬಹಳ ಮುಖ್ಯ. ಕರಾವಳಿ ಪ್ರದೇಶದಲ್ಲಿ ಖಾಸಗಿ ಸಾರಿಗೆ ದೊಡ್ಡ ಪ್ರಮಾಣದಲ್ಲಿ ಜನರ ಸೇವೆ ಮಾಡುತ್ತಿದೆ. ನಮ್ಮ ಸಾರಿಗೆ ಸಂಸ್ಥೆ ಜನರ ಸೇವೆ, ಖಾಸಗಿಯವರಿಗಿಂತ ಹೆಚ್ಚಿನ ದಕ್ಷತೆ ಹಾಗೂ ನಿಷ್ಠೆಯಿಂದ ಸೇವೆ ಸಲ್ಲಿಸಬೇಕು. ಶಾಲಾ ಕಾಲೇಜು ಮಕ್ಕಳಿಗೆ, ಆಸ್ಪತ್ರೆಗಳಿಗೆ ಹೋಗುವವರಿಗೆ ಬಸ್ ಸೇವೆ ಅತ್ಯಂತ ಮಹತ್ವವಾದದ್ದು. ಬಸ್ ನಿಲ್ದಾಣದಲ್ಲಿ ಬಸ್ ಓಡಾಟದ ಸಮಯ ಪರಿಪಾಲನೆ ಹಾಗೂ ಸ್ವಚ್ಛತೆಗೆ ಹೆಚ್ಚಿನ ಗಮನ ಹರಿಸಬೇಕು. ಬಸ್ ನಿಲ್ದಾಣದ ಆವರಣದಲ್ಲಿ ಎರಡು ಮಲ್ಟಿಪ್ಲೆಕ್ಸ್ ಚಿತ್ರಮಂದಿರ ನಿರ್ಮಿಸಲು ಅತಿ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಸಮಾರಂಭದಲ್ಲಿ ಸಾರಿಗೆ ಸಚಿವ ಬಿ. ಶ್ರೀರಾಮುಲು, ಸಚಿವರಾದ ಎಸ್.ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ರಘುಪತಿ ಭಟ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!