Thursday, May 19, 2022
spot_img
Homeರಾಜ್ಯನಾನು ತಪ್ಪು ಮಾಡಿಲ್ಲ, ನಾನ್ಯಾಕೆ ರಾಜೀನಾಮೆ ಕೊಡಲಿ : ಕೆ.ಎಸ್. ಈಶ್ವರಪ್ಪ

ನಾನು ತಪ್ಪು ಮಾಡಿಲ್ಲ, ನಾನ್ಯಾಕೆ ರಾಜೀನಾಮೆ ಕೊಡಲಿ : ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ನಾನು ಯಾವುದೇ ತಪ್ಪು ಮಾಡಿಲ್ಲ, ನಾನ್ಯಾಕೆ ರಾಜೀನಾಮೆ ನೀಡಲಿ ಎಂದು ಸಚಿವ ಕೆ.ಎಸ್ . ಈಶ್ವರಪ್ಪ ಹೇಳಿದ್ದಾರೆ.
ಬಿಜೆಪಿ ಕಾರ್ಯಕರ , ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣ ಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿದೆ. ಕೋರ್ಟ್ ತೀರ್ಪು ಹೊರಬರಲಿ ಎಂದು ಹೇಳಿದ್ದಾರೆ.
ಈ ಬಗ್ಗೆ ಪ್ರತಿಪಕ್ಷ ಕಾಂಗ್ರೆಸ್ ನಾಯಕರು ಈಶ್ವರಪ್ಪ ಅವರ ಮೇಲೆ ಆರೋಪ ಮಾಡಿದ್ದು, ಇದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಎ. 12 ರಂದು ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಬಹಿರಂಗವಾಗುತ್ತಿದ್ದಂತೆ ಅವರು ವಾಟ್ಸಾಪ್ ನಲ್ಲಿ ಕಳುಹಿಸಿದ್ದ ಸಂದೇಶ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅದರಲ್ಲಿ ನನ್ನ ಆತ್ಮಹತ್ಯೆಗೆ ಸಚಿವ ಈಶ್ವರಪ್ಪನವರೇ ಕಾರಣ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!