Saturday, May 21, 2022
spot_img
Homeದೇಶಭಾರತದ ಜೊತೆ ಉತ್ತಮ ಸಂಬಂಧ ಬೆಳೆಸಬೇಕಾದರೆ ಕಾಶ್ಮೀರ ವಿವಾದ ಇತ್ಯರ್ಥವಾಗಬೇಕು : ಪಾಕ್​ ಪ್ರಧಾನಿ ಶೆಹಬಾಜ್‌

ಭಾರತದ ಜೊತೆ ಉತ್ತಮ ಸಂಬಂಧ ಬೆಳೆಸಬೇಕಾದರೆ ಕಾಶ್ಮೀರ ವಿವಾದ ಇತ್ಯರ್ಥವಾಗಬೇಕು : ಪಾಕ್​ ಪ್ರಧಾನಿ ಶೆಹಬಾಜ್‌

ಇಸ್ಲಾಮಾಬಾದ್‌ : ಪಾಕಿಸ್ತಾನದ ನೂತನ ಪ್ರಧಾನಿಯಾಗಿ ವಿಪಕ್ಷ ಮೈತ್ರಿಕೂಟದ ಪ್ರಮುಖ ಹಾಗೂ ಪಿಎಂಎಲ್‌-ಎನ್‌ ನಾಯಕ ಶೆಹಬಾಜ್‌ ಷರೀಫ್‌ ಆಯ್ಕೆಯಾದ ಬೆನ್ನಲ್ಲೇ ಮಾತನಾಡಿರುವ ಅವರು, ಭಾರತದೊಂದಿಗೆ ಉತ್ತಮ ಸಂಬಂಧ ಬೆಳೆಸಬೇಕಾದರೆ ಕಾಶ್ಮೀರ ವಿವಾದ ಇತ್ಯರ್ಥವಾಗಬೇಕು ಎಂದಿದ್ದಾರೆ.
ಸಂಸತ್​​ನಲ್ಲಿ ಮಾತನಾಡಿರುವ ಅವರು, ಭಾರತದೊಂದಿಗೆ ನಾವು ಉತ್ತಮ ಸಂಬಂಧ ಬೆಳೆಸಲು ಬಯಸುತ್ತೇವೆ. ಆದರೆ, ಅದಕ್ಕೂ ಮೊದಲು ಜಮ್ಮು-ಕಾಶ್ಮೀರದ ವಿವಾದ ಇತ್ಯರ್ಥವಾಗಬೇಕು. ಈ ವಿಚಾರವನ್ನ ನಾವು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಚರ್ಚಿಸಲು ಮುಂದಾಗುತ್ತೇವೆ ಎಂದಿದ್ದಾರೆ.
ಸಾರ್ವಜನಿಕ ಭಾಷಣಗಳಲ್ಲಿ ವೇಳೆ ಅನೇಕ ಸಲ ಸಂಯಮ ಕಳೆದುಕೊಳ್ಳುವ ಶೆಹಬಾಜ್, ಈ ಹಿಂದೆ ಕೂಡ ಅನೇಕ ಸಲ ಜಮ್ಮು-ಕಾಶ್ಮೀರದ ವಿಚಾರವಾಗಿ ಮಾತನಾಡಿದ್ದಾರೆ.
ಶೆಹಬಾಜ್​ ಎ. 12 ರ ರಾತ್ರಿ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದು, ಹೊಸ ಸಚಿವ ಸಂಪುಟ ರಚನೆ ಮಾಡುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!