ಆರೋಗ್ಯ ಇಲಾಖೆ ನೌಕರರ ಕ್ರೀಡಾಕೂಟ

ಕಾರ್ಕಳ : ಕಳೆದ ಎರಡು ವರ್ಷಗಳಿಂದ ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸಿರುವುದು ಪ್ರಶಂಸನೀಯವೆಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ಸಂಘ ಉಡುಪಿ, ಕಾರ್ಕಳ ತಾಲೂಕು ಎನ್.ಹೆಚ್.ಎಂ. ನೌಕರರ ಸಂಘ ಆಶ್ರಯದಲ್ಲಿ ರೋಟರಿ ಕ್ಲಬ್ ಕಾರ್ಕಳ ಪ್ರಾಯೋಜಕತ್ವದಲ್ಲಿ ಎ. 8ರಂದು ತಾಲೂಕಿನ ಸ್ವರಾಜ್‌ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಕರ್ವತ್ಯದ ಒತ್ತಡ ನಿವಾರಿಸುವ ಸಲುವಾಗಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದು ಬಹಳ ಮುಖ್ಯ. ಕ್ರೀಡೆಯಿಂದ ಸಂಘಟಿನೆ ಸಾಧ್ಯ ಎಂದು ಆಯನೂರು ಹೇಳಿದರು.
ಪುರಸಭಾ ಅಧ್ಯಕ್ಷೆ ಸುಮಾ ಕೇಶವ್, ಪುರಸಭಾ ಮುಖ್ಯಾಧಿಕಾರಿ ರೂಪ ಶೆಟ್ಟಿ, ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ್ ಹೆಗ್ಡೆ, ಪುರಸಭಾ ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್, ರೋಟರಿ ಕ್ಲಬ್ ಕಾರ್ಕಳ‌ ಇದರ ಅಧ್ಯಕ್ಷ ಸುರೇಶ್ ನಾಯಕ್, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಎಂ.ಜಿ. ರಾಮ, ಕರ್ನಾಟಕ ರಾಜ್ಯ ಆ.ವೈ.ಶಿ.ಇ.ಗು.ಹೊ.ಗು. ನೌಕರರ ಸಂಘದ ರಾಜ್ಯಾಧ್ಯಕ್ಷ ವಿಶ್ವರಾಧ್ಯ ಯಾಮೋಜಿ, ಜಿಲ್ಲಾಧ್ಯಕ್ಷ ಆಲಂದೂರು ಮಂಜುನಾಥ್ ಗಾಣಿಗ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಉಡುಪಿ ಜಿಲ್ಲಾ ಶಾಖೆ ಇದರ ಅಧ್ಯಕ್ಷ ಸುಬ್ರಮಣ್ಯ ಶೇರಿಗಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ, ಶಿರ್ಡಿ ಸಾಯಿ ಎಜುಕೇಶನ್ ಅಧ್ಯಕ್ಷ ಚಂದ್ರಹಾಸ ಸುವರ್ಣ, ತಾಲೂಕು ಎನ್.ಹೆಚ್.ಎಂ. ನೌಕರರ ಸಂಘದ ಅಧ್ಯಕ್ಷೆ ಡಾ. ಮಾನಸ ಉಪಸ್ಥಿತರಿದ್ದರು.
ಕ್ರೀಡಾಕೂಟದಲ್ಲಿ ಕುಂದಾಪುರ, ಬೈಂದೂರು, ಕಾಪು, ಬ್ರಹ್ಮಾವರ, ಉಡುಪಿ, ಹೆಬ್ರಿ, ಕಾರ್ಕಳ ತಾಲೂಕು ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.
ಜಿಲ್ಲಾ ಕ್ಷಯರೋಗ ವಿಭಾಗದ ಪಿಪಿಎಂ ಸಂಯೋಜಕ ಸುರೇಶ್ ಸ್ವಾಗತಿಸಿ, ಹಿರಿಯ ಕ್ಷಯರೋಗ ಚಿಕಿತ್ಸಾ ಮೇಲ್ವಿಚಾರಕ ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಕಳ ತಾಲೂಕು ಹಿರಿಯ ಕ್ಷಯರೋಗ ಚಿಕಿತ್ಸಾ ಮೇಲ್ವಿಚಾರಕ ಶಿವಕುಮಾರ್ ವಂದಿಸಿದರು.





























































































































































































































error: Content is protected !!
Scroll to Top