ಕಾರ್ಕಳ : ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 131ನೇ ಜಯಂತಿಯನ್ನು ಕಾರ್ಕಳ ವಿಧಾನ ಸಭಾ ಕ್ಷೇತ್ರಾದ್ಯಂತ 14 ಕಡೆಗಳಲ್ಲಿ ಆಚರಿಸಲಾಯಿತು.
ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.
ಹಿರಿಯ ನ್ಯಾಯವಾದಿ ಎಂ.ಕೆ. ವಿಜಯ್ ಕುಮಾರ್ ಅಂಬೇಡ್ಕರ್ ಅವರ ಬಗ್ಗೆ ಮಾತನಾಡಿ, ಅವರ ತತ್ವ ಸಿದ್ಧಾಂತಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದರು.
ಹಿರಿಯ ಮುಖಂಡ ಬೋಳ ಪ್ರಭಾಕರ ಕಾಮತ್, ಜಿಲ್ಲಾ ಉಪಾಧ್ಯಕ್ಷರು ಸವಿತಾ ಕೋಟ್ಯಾನ್, ರೇಷ್ಮಾ ಶೆಟ್ಟಿ, ನಗರಾಧ್ಯಕ್ಷ ರವೀಂದ್ರ ಮೊಯಿಲಿ, ಜಯರಾಮ್ ಸಾಲ್ಯಾನ್, ರಾಮಚಂದ್ರ ನಾಯಕ್, ಉದಯ್ ಕೋಟ್ಯಾನ್, ಬಿಜೆಪಿ ವಕ್ತಾರ ಹರೀಶ್ ಶೆಣೈ, ನಿರಂಜನ್ ಜೈನ್, ಪುರಸಭಾ ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್, ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಜ್ಯೋತಿ ರಮೇಶ್, ನಗರ ಮ.ಮೋ. ಅಧ್ಯಕ್ಷೆ ಸುಮಾ ರವಿಕಾಂತ್, ಬೆಳ್ಮಣ್ ಶಕ್ತಿಕೇಂದ್ರ ಮ.ಮೋ.ಅಧ್ಯಕ್ಷೆ ಮಂಜುಳಾ ಶೆಟ್ಟಿ, ಸುರೇಖಾ ಕಾಮತ್, ಮೀನಾಕ್ಷಿ ಗಂಗಾಧರ್, ರಮಾನಂದ ಪೂಜಾರಿ, ಶ್ರೀನಿವಾಸ್ ಭೋವಿ, ಸುರೇಶ್ ಮತ್ತು ಯುವ ಮೋರ್ಚಾದ ಪದಾಧಿಕಾರಿಗಳು, ಸದಸ್ಯರು ಹಾಗೂ ವಿವಿಧ ಮೋರ್ಚಾದ ಅಧ್ಯಕ್ಷರು, ಪದಾಧಿಕಾರಿಗಳು, ಪುರಸಭಾ ಕೌನ್ಸಿಲರ್ಸ್ ಮುಂತಾದವರು ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿಗಳಾದ ನವೀನ್ ನಾಯಕ್ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು. ಪ್ರಕಾಶ್ ರಾವ್ ವಂದಿಸಿದರು.
ಈ ಸಂದರ್ಭದಲ್ಲಿ ನಲ್ಲೂರು ಗ್ರಾ.ಪಂ. ಕಲತ್ರಪಾದೆಯ ಪ್ರಶಾಂತ್ ಕೋಟ್ಯಾನ್, ಕುಸುಮಾ ಅವರು ಪಕ್ಷಕ್ಕೆ ಸೇರ್ಪಡೆಯಾದರು.





