Tuesday, May 17, 2022
spot_img
Homeರಾಜ್ಯಸಚಿವ ಸ್ಥಾನಕ್ಕೆ ಕೆ.ಎಸ್.‌ಈಶ್ವರಪ್ಪ ರಾಜೀನಾಮೆ

ಸಚಿವ ಸ್ಥಾನಕ್ಕೆ ಕೆ.ಎಸ್.‌ಈಶ್ವರಪ್ಪ ರಾಜೀನಾಮೆ

ಬೆಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಎ. 14ರಂದು ಸಂಜೆ ದಿಢೀರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಈಶ್ವರಪ್ಪ ಅವರು, ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಯಾವುದೇ ತಪ್ಪು ಮಾಡಿಲ್ಲ. ಆ ಬಗ್ಗೆ ತನಿಖೆಯಿಂದ ಎಲ್ಲಾ ಸತ್ಯಾಸತ್ಯತೆ ತಿಳಿದು ಬರಲಿದೆ. ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದೇನೆ. ತನಿಖೆಯಿಂದ ನಾನು ನಿರ್ದೋಷಿ ಎಂಬುವುದಾಗಿ ಹೊರಬರಲಿದೆ. ನನಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು. ನಾನು ನಾಳೆ ಸಂಜೆ ಸಿಎಂ ಭೇಟಿಯಾಗಿ ರಾಜೀನಾಮೆ ಸಲ್ಲಿಸುವುದಾಗಿ ತಿಳಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!