ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎ. 14ರಂದು ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾಪಡೆ ,ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.
ಕಾಶ್ಮೀರದ ದಕ್ಷಿಣ ಭಾಗ ಶೋಪಿಯಾನ್ ಜಿಲ್ಲೆಯ ಬಡಿಗಮ್, ಝೈನಾಪೋರಾದಲ್ಲಿ ಉಗ್ರಗಾಮಿಗಳ ಇರುವಿಕೆಯ ಬಗ್ಗೆ ಮಾಹಿತಿ ಪಡೆದ ನಂತರ “ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಶಂಕಿತ ಸ್ಥಳವನ್ನು ಸುತ್ತುವರೆದಿದ್ದರಿಂದ, ಅಡಗಿಕೊಂಡಿದ್ದ ಭಯೋತ್ಪಾದಕರು ಗುಂಡಿನ ಚಕಮಕಿಯನ್ನು ಪ್ರಾರಂಭಿಸಿದರು” ಎಂದು ಭದ್ರತಾ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಶೋಪಿಯಾನ್ ನ ಬಡಿಗಮ್, ಜೈನಾಪೋರಾ ಪ್ರದೇಶದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಪ್ರವೃತ್ತವಾಗಿವೆ. ಹೆಚ್ಚಿನ ವಿವರಗಳನ್ನು ಕಲೆಹಾಕಲಾಗುತ್ತಿದೆ ಎಂದು ಪೊಲೀಸರು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ಕಾಶ್ಮೀರದಲ್ಲಿ ಗುಂಡಿನ ಚಕಮಕಿ : ಇಬ್ಬರು ಉಗ್ರರ ಹತ್ಯೆ
Recent Comments
ಕಗ್ಗದ ಸಂದೇಶ
on