ರೋಗ ಬಾರದಂತೆ ಎಚ್ಚರ ವಹಿಸಿ : ಕೂರ್ಮಾ ರಾವ್‌

ಮಣಿಪಾಲ : ರೋಗ ಬಂದ ನಂತರ ಚಿಕಿತ್ಸೆ ಪಡೆಯುವ ಬದಲು ರೋಗ ಬರದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡರೆ ಅನಾರೋಗ್ಯವನ್ನು ತಡೆಗಟ್ಟಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಹೇಳಿದರು.
ಎ. 13ರಂದು ಜಿ.ಪಂ. ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಡೆಂಗ್ಯೂ ಮತ್ತು ಮಲೇರಿಯಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಮಾನ್ಯವಾಗಿ ಮಳೆಗಾಲದಲ್ಲಿ ನೀರು ನಿಲ್ಲುವುದರಿಂದ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್ಯೂ, ಮಲೇರಿಯಾದಂತಹ ರೋಗಗಳು ಹರಡುತ್ತವೆ. ಹಾಗಾಗಿ ಸೊಳ್ಳೆಗಳ ನಿಯಂತ್ರಣಕ್ಕೆ ಸ್ಥಳೀಯ ಸಂಸ್ಥೆಗಳು ಮತ್ತು ಆರೋಗ್ಯ ಇಲಾಖೆಗಳು ಅಗತ್ಯ ಕ್ರಮಗಳನ್ನು ಕೈಗೊಂಡು ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದರು.
ಕಳೆದ ವರ್ಷದಲ್ಲಿ ನಗರ ಪ್ರದೇಶಗಳಲ್ಲಿ ಡೆಂಗ್ಯೂ, ಮಲೇರಿಯಾದಂತಹ ಪ್ರಕರಣಗಳು ಹೆಚ್ಚಿಗೆ ಕಂಡುಬಂದಿತ್ತು. ರೋಗ ಲಕ್ಷಣಗಳು ಕಂಡುಬಂದವರ ಆರೋಗ್ಯ ತಪಾಸಣೆ ಜೊತೆಗೆ ಚಿಕಿತ್ಸೆ ನೀಡುವುದರಿಂದ ರೋಗದ ಹರಡುವಿಕೆಯನ್ನು ತಡೆಗಟ್ಟಲು ಸಾಧ್ಯ ಎಂದವರು ಹೇಳಿದರು.





























































































































































































































error: Content is protected !!
Scroll to Top