ನವದೆಹಲಿ : 2022-23 ನೇ ಶೈಕ್ಷಣಿಕ ಸಾಲಿನಲ್ಲಿ 10 ಮತ್ತು 12ನೇ ತರಗತಿಯನ್ನು ಎರಡು ಭಾಗಗಳಾಗಿ ವಿಂಗಡಣೆ ಮಾಡಬೇಕೆ ಅಥವಾ ಒಂದೇ ಬೋರ್ಡ್ ಪರೀಕ್ಷೆ ಮಾದರಿಯಲ್ಲಿ ಉಳಿಸಿಕೊಳ್ಳಬೇಕೆ ಎಂಬ ಬಗ್ಗೆ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಇನ್ನೂ ತೀರ್ಮಾನ ಮಾಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಶೈಕ್ಷಣಿಕ ಅವಧಿಯನ್ನು ವಿಭಜಿಸುವುದು, ಎರಡು ಅವಧಿಯ ಅಂತ್ಯದ ಪರೀಕ್ಷೆಗಳನ್ನು ನಡೆಸುವುದು ಮತ್ತು ಪಠ್ಯಕ್ರಮವನ್ನು ತರ್ಕಬದ್ಧಗೊಳಿಸುವುದು 2021-22 ರಲ್ಲಿ 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ವಿಶೇಷ ಮೌಲ್ಯಮಾಪನ ಯೋಜನೆಯ ಭಾಗವಾಗಿತ್ತು. ಆದರೆ ಈ ವರ್ಷ ಕೂಡ ಹಿಂದಿನ ವರ್ಷದ ರೀತಿ ಮುಂದುವರಿಯುತ್ತದೆಯೇ ಅಥವಾ ಕೋವಿಡ್ ಗಿಂತ ಮೊದಲಿನ ನಿಯಮ ಜಾರಿಗೆ ಬರುತ್ತದೆಯೇ ಎಂಬ ಬಗ್ಗೆ ಇನ್ನೂ ಸಿಬಿಎಸ್ಇ ತೀರ್ಮಾನ ಮಾಡಿಲ್ಲ. ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ 2020-21ರ ಶೈಕ್ಷಣಿಕ ಅವಧಿಗೆ ಯಾವುದೇ ಬೋರ್ಡ್ ಪರೀಕ್ಷೆಗಳನ್ನು ನಡೆಸಲಾಗದ ಕಾರಣ ಪರ್ಯಾಯ ಮೌಲ್ಯಮಾಪನ ಯೋಜನೆಯನ್ನು ಬಳಸಿಕೊಂಡು ವಿದ್ಯಾರ್ಥಿಗಳನ್ನು ಮೌಲ್ಯಮಾಪನ ಮಾಡಬೇಕಾಗಿದ್ದ ಬೋರ್ಡ್ ಪರೀಕ್ಷೆಗಳನ್ನು ಎರಡು ಅವಧಿಗಳಲ್ಲಿ ನಡೆಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು. ಈ ಕ್ರಮವನ್ನು ಒಂದು ಬಾರಿಯ ಕ್ರಮವಾಗಿ ಘೋಷಿಸಲಾಗಿತ್ತು ಎಂದು ಮಂಡಳಿಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
Recent Comments
ಕಗ್ಗದ ಸಂದೇಶ
on