Thursday, May 26, 2022
spot_img
Homeಜಿಲ್ಲಾಬಟ್ಟೆಯ ಗುಂಡಿಗಳ ರೂಪದಲ್ಲಿ ಚಿನ್ನ ಸಾಗಾಟ : ಆರೋಪಿ ಪೋಲಿಸರ ಬಲೆಗೆ

ಬಟ್ಟೆಯ ಗುಂಡಿಗಳ ರೂಪದಲ್ಲಿ ಚಿನ್ನ ಸಾಗಾಟ : ಆರೋಪಿ ಪೋಲಿಸರ ಬಲೆಗೆ

ಮಂಗಳೂರು : ಬಟ್ಟೆಯ ಗುಂಡಿಗಳ ರೂಪದಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಎ. 15ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ದುಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿನೋರ್ವನನ್ನು ತಪಾಸಣೆಗೆ ಒಳಪಡಿಸಿದಾಗ ಈ ಅಕ್ರಮ ಬಯಲಾಗಿದೆ. ಆರೋಪಿಯಿಂದ 100 ಗ್ರಾಂ. ತೂಕದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿ ಚಿನ್ನವನ್ನು ಸಣ್ಣ ವಾಶರ್ ರೂಪದಲ್ಲಿ ಮಾರ್ಪಡಿಸಿ, ಬಟ್ಟೆಗಳ ಗುಂಡಿಗಳಲ್ಲಿ ಅಡಗಿಸಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಎಂದು ಕಸ್ಟಮ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!