Tuesday, May 17, 2022
spot_img
Homeಜಿಲ್ಲಾಎಸ್‌ಇಜೆಡ್‌ ಫಿಶ್‌ ಮಿಲ್‌ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ : ಐವರು ಕಾರ್ಮಿಕರು ಸಾವು

ಎಸ್‌ಇಜೆಡ್‌ ಫಿಶ್‌ ಮಿಲ್‌ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ : ಐವರು ಕಾರ್ಮಿಕರು ಸಾವು

ಮಂಗಳೂರು : ಬಜಪೆಯ ಎಸ್‌ಇಝೆಡ್ ವ್ಯಾಪ್ತಿಯಲ್ಲಿನ ಫಿಶ್ಮಿಲ್‌ ಫ್ಯಾಕ್ಟರಿಯಲ್ಲಿ ಎ. 17 ರಂದು ರಾತ್ರಿ 7 ರ ಸುಮಾರಿಗೆ ವಿಷಾನಿಲ ಸೋರಿಕೆಯಾಗಿ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ.

ಮುಂಬೈ ಮೂಲದ ರಾಜು ಎಂಬವರಿಗೆ ಸೇರಿದ ಶ್ರೀ ಉಲ್ಕಾ LLP ಮೀನು ಸಂಸ್ಕರಣಾ ಕಂಪೆನಿಯಲ್ಲಿ ಮೀನು ಶುದ್ಧೀಕರಣಗೊಳಿಸುವ ಬೃಹತ್ ಟ್ಯಾಂಕ್ಗೆ ಕಾರ್ಮಿಕನೊಬ್ಬ ಇಳಿದಿದ್ದು, ಈ ವೇಳೆ ಏಕಾಏಕಿ ಕುಸಿದು ಬಿದ್ದ ಅತನನ್ನು ರಕ್ಷಿಸಲು ಇತರ ಏಳು ಜನ ಕಾರ್ಮಿಕರು ಒಳಕ್ಕಿಳಿದಿದ್ದಾರೆ. ಎಲ್ಲರೂ ಅಸ್ವಸ್ಥಗೊಂಡಿದ್ದಾರೆ. ಪ್ರಕರಣದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದಂತೆ ಅಸ್ವಸ್ಥ‌ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಮುಂಜಾನೆ ಇಬ್ಬರು ಸಾವನ್ನಪ್ಪಿದ್ದಾರೆ. ಸಮೀರುಲ್ಲಾ ಇಸ್ಲಾಂ, ಉಮರ್ ಫಾರೂಕ್, ನಿಜಾಮುದ್ದೀನ್ ಸಾಜ್ ಸೇರಿ ಐವರು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಸಧ್ಯ ಫಿಶ್‌ ಮಿಲ್‌ ಕಾರ್ಖಾನೆಯನ್ನು ಮುಚ್ಚಲಾಗಿದೆ. ಕಾರ್ಮಿಕರಿಗೆ ಯಾವುದೇ ರಕ್ಷಣಾತ್ಮಕ ಉಪಕರಣಗಳನ್ನು ಒದಗಿಸದೇ ನಿರ್ಲಕ್ಷ್ಯ ವಹಿಸಿದ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಂಪನಿಯ ಪ್ರೊಡಕ್ಷನ್ ಮ್ಯಾನೇಜರ್ ರೂಬಿ ಜೋಸೆಫ್, ಏರಿಯಾ ಮ್ಯಾನೇಜರ್ ಕುಬೇರ್ ಗಾಡೆ ಮತ್ತು ಸೂಪರ್ ವೈಸರ್ ಮೊಹಮ್ಮದ್ ಅನ್ವರ್ ಹಾಗೂ ಕಂಪನಿಯ ಕಾರ್ಮಿಕರ ಆಗುಹೋಗುಗಳನ್ನು ನೋಡಿಕೊಳ್ಳುತ್ತಿದ್ದ ಸ್ಥಳೀಯ ವ್ಯಕ್ತಿ ಫಾರೂಕ್ (ಅಜಾದ್ ನಗರ ಉಳ್ಳಾಲ) ಎಂಬವರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ಮುಂದುವರೆದಿದೆ.

ಮೃತಪಟ್ಟವರ ಬಗ್ಗೆ ಅವರ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ. ಮೃತದೇಹಗಳನ್ನು ಮಂಗಳೂರಿನ ಎಜೆ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿ ಮೃತರ ವಾರಸುದಾರರಿಗೆ ಹಸ್ತಾಂತರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!