ಬೆಂಗಳೂರು: ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ತಪ್ಪಿಸ್ಥರು ಯಾರೇ ಆಗಿದ್ದರೂ ಅವರಿಗೆ ಶಿಕ್ಷೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪೊಲೀಸ್ ಠಾಣೆ ಮೇಲೆ ದಾಳಿ ನಡೆಸುವುದು ಅಕ್ಷಮ್ಯ ಅಪರಾಧ. ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಪೊಲೀಸ್ ಠಾಣೆಯಲ್ಲಿ ದಾಂಧಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ಮಾತನಾಡಿದ ಅವರು, ಹೈಕಮಾಂಡ್ ಕರೆದಾಗ ಹೋಗುತ್ತೇನೆ. ಮೊದಲು ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಅವರು ತಿಳಿಸಿದ್ದಾರೆ.