ಕಾರ್ಕಳ : ಹೆಬ್ರಿ ತಾಲೂಕು ಪಂಚಾಯತ್ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ 147 ಲಕ್ಷ ರೂ., ಕಾರ್ಕಳ ತಾಲೂಕು ಪಂಚಾಯತ್ಗೆ ಹೆಚ್ಚುವರಿಯಾಗಿ 30 ಲಕ್ಷ ರೂ. ಅನುದಾನ ಸರಕಾರದಿಂದ ಬಿಡುಗಡೆಯಾಗಿದೆ ಎಂದು ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ಕಾರ್ಕಳ ತಾಲೂಕು ಪಂಚಾಯತ್ ಕಟ್ಟಡ ನಿರ್ಮಾಣಕ್ಕೆ 1.64 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಹೆಚ್ಚುವರಿಯಾಗಿ 30 ಲಕ್ಷ ರೂ. ಅವಶ್ಯಕತೆಯಿದ್ದ ಕಾರಣ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅನುದಾನ ಮಂಜೂರುಗೊಳಿಸಿದೆ ಎಂದು ಮಾಹಿತಿ ನೀಡಿದರು.
ಮೂಡಬಿದ್ರೆ ತಾ.ಪಂ.ಗೆ 147 ಲಕ್ಷ ರೂ.
ಮಾರ್ಪಾಡಿ ಗ್ರಾಮದ ಸರ್ವೆ ನಂ.321/1-3 ರಲ್ಲಿ 0.87 ಎಕ್ರೆ ಜಾಗವನ್ನು ತಾಲೂಕು ಪಂಚಾಯತ್ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾಗಿದ್ದು, ಮಂಜೂರಾತಿ ಹಂತದಲ್ಲಿದೆ. ಇಲ್ಲಿ ತಾಲೂಕು ಪಂಚಾಯತ್ ಕಟ್ಟಡ ನಿರ್ಮಾಣಕ್ಕೆ 475 ಲಕ್ಷ ರೂ. ಅಂದಾಜು ಪಟ್ಟಿ ತಯಾರಿಸಿ ತಾಂತ್ರಿಕವಾಗಿ ಪರಿಶೀಲಿಸಿ, ಅನುದಾನ ಬಿಡುಗಡೆಗಾಗಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯಕಾರಿ ಇಂಜಿನಿಯರ್ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ. ಇದೀಗ ಮೂಡಬಿದ್ರೆ ತಾ.ಪಂ. ಕಟ್ಟಡ ನಿರ್ಮಾಣಕ್ಕೂ 147 ಲಕ್ಷ ರೂ. ಬಿಡುಗಡೆಯಾಗಿದೆ.