ಬೆಂಗಳೂರು : ರಾಜ್ಯಾದ್ಯಂತ ಇನ್ನೂ ಮೂರು ದಿನ ಮಳೆಯಾಗಲಿದೆ. ಇಂದಿನಿಂದ 3 ದಿನ ಕರ್ನಾಟಕ ಉ. ಒಳನಾಡು, ದ. ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದಲ್ಲಿ ಹವಾಮಾನ ಇಲಾಖೆ ಬಹುತೇಕ ರಾಜ್ಯಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಿದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು ಧಾರವಾಡದಲ್ಲಿ ಇನ್ನೆರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದ. ಒಳನಾಡಿನಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮೋಡ ಮುಸುಕಿನ ವಾತಾವರಣ ಮುಂದುವರೆಯಲಿದೆ. ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ದ. ಭಾರತದಲ್ಲಿ ಮುಂದಿನ 3 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯಾದ್ಯಂತ ಇನ್ನೂ ಮೂರು ದಿನ ಮಳೆ ಸಾಧ್ಯತೆ
Recent Comments
ಕಗ್ಗದ ಸಂದೇಶ
on