Tuesday, May 17, 2022
spot_img
Homeಜಿಲ್ಲಾಹಿಜಾಬ್‌ ವಿವಾದ - ಇಂದು ಉಡುಪಿಯ ಮೂವರು ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರು

ಹಿಜಾಬ್‌ ವಿವಾದ – ಇಂದು ಉಡುಪಿಯ ಮೂವರು ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರು

ಉಡುಪಿ : ಹಿಜಾಬ್ ಹಕ್ಕಿಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿಯರ ಪೈಕಿ ಇಬ್ಬರು ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರು ಎ. 22ರ ಬೆಳಿಗ್ಗೆ ಪರೀಕ್ಷೆ ಬರೆಯಲು ನಿರಾಕರಿಸಿದ್ದರೆ, ಇಂದು ಮೂವರು ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರು ಗಣಿತಶಾಸ್ತ್ರ ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ.
ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಅಲ್ಮಾಸ್ ಎ.ಎಚ್., ಹಝ್ರಾ ಶಿಫಾ, ಆಯಿಷಾ ಪಲ್ಲವ್ಕರ್ ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ. ಇವರಲ್ಲಿ ಅಲ್ಮಾಸ್ ಶುಕ್ರವಾರ ಸಂಜೆ ಕಾಲೇಜಿಗೆ ಆಗಮಿಸಿ ಹಾಲ್ ಟಿಕೆಟ್ ಪಡೆದುಕೊಂಡು ಹೋಗಿದ್ದಾರೆ. ಆದರೆ ಉಳಿದ ಇಬ್ಬರು ಇಂದು ಬೆಳಗ್ಗೆ ಕೂಡ ಹಾಲ್ ಟಿಕೆಟ್ ಪಡೆದುಕೊಳ್ಳಲು ಆಗಮಿಸಿಲ್ಲ. ನಿನ್ನೆ ದ್ವಿತೀಯ ಪಿಯು ಕಾಮರ್ಸ್ ವಿದ್ಯಾರ್ಥಿನಿಯರಾದ ಆಲಿಯಾ ಅಸ್ಸಾದಿ ಹಾಗೂ ರೇಶಮ್ ತಾವು ಕಲಿಯುತ್ತಿದ್ದ ಸರಕಾರಿ ಮಹಿಳಾ ಕಾಲೇಜ್ ಗೆ 9.30 ರ ವೇಳೆಗೆ ಆಗಮಿಸಿ, ಹಿಜಾಬ್ ತೆಗೆದು ಕಾಲೇಜಿಗೆ ಪ್ರವೇಶಿಸಿ ಹಾಲ್ ಟಿಕೆಟ್ ಪಡೆದುಕೊಂಡು, ನಂತರ ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದು, ಈ ವೇಳೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕೇಳಿದ್ದರು. ಆದರೆ ಅದಕ್ಕೆ ಅಧಿಕಾರಿಗಳು ಒಪ್ಪದೇ ಇದ್ದಾಗ ಖುದ್ದು ತಹಶೀಲ್ದಾರರೇ ಬಂದು ಮನವೊಲಿಸಿದ್ದರು. ಆದರೆ ಹಿಜಾಬ್ ಧರಿಸಿ ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯದೆ ಮನೆಗೆ ವಾಪಾಸ್ಸಾಗಿದ್ದರು.

ಉಡುಪಿ ಶಾಸಕ ರಘಪತಿ ಭಟ್‌ ಪ್ರತಿಕ್ರಿಯೆ
ಈ ಬಗ್ಗೆ ಉಡುಪಿ ಶಾಸಕ ಕೆ. ರಘುಪತಿ ಭಟ್ ಪ್ರತಿಕ್ರಯಿಸಿ, ವಿದ್ಯಾರ್ಥಿನಿಯರು ನಾಳೆ ಕೂಡ ಪರೀಕ್ಷಾ ಕೇಂದ್ರಕ್ಕೆ ಹೋಗಿ ನಾಟಕ ಮಾಡಿದರೆ, ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.‌

ಹಿಜಾಬ್ ಹೋರಾಟಗಾರ್ತಿ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಟ್ವೀಟ್
ನನಗೆ ಮತ್ತು ರೇಶಮ್‌ಗೆ ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ನಿರಾಕರಿಸಲಾಗಿದೆ. ಇದರಿಂದ ನಾವು ಮತ್ತೆ ಮತ್ತೆ ನಿರಾಶೆಯನ್ನು ಎದುರಿಸುತ್ತಿದ್ದೇವೆ. ನಾಳೆ ಪರೀಕ್ಷೆಗೆ ಹಾಜರಾಗಲು ಹೋದರೆ ನಮ್ಮ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಶಾಸಕ ರಘುಪತಿ ಭಟ್ ಬೆದರಿಕೆ ಹಾಕಿದ್ದಾರೆ. ಇಲ್ಲಿ ನಾವು ಮಾಡಿರುವ ಅಪರಾಧ ಏನು? ನಮ್ಮ ದೇಶ ಎತ್ತ ಸಾಗುತ್ತಿದೆ’ ಎಂದು ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಎ. 22ರ ರಾತ್ರಿ ಮಾಡಿರುವ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!