Tuesday, May 17, 2022
spot_img
Homeದೇಶಜಮ್ಮು-ಕಾಶ್ಮೀರ ಪ್ರಧಾನಿ ಮೋದಿ ರ್‍ಯಾಲಿ ಸ್ಥಳದಿಂದ 12 ಕಿ.ಮೀ ದೂರದಲ್ಲಿ ಸ್ಫೋಟ ಹೆಚ್ಚಿದ ಆತಂಕ

ಜಮ್ಮು-ಕಾಶ್ಮೀರ ಪ್ರಧಾನಿ ಮೋದಿ ರ್‍ಯಾಲಿ ಸ್ಥಳದಿಂದ 12 ಕಿ.ಮೀ ದೂರದಲ್ಲಿ ಸ್ಫೋಟ ಹೆಚ್ಚಿದ ಆತಂಕ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎ. 24 ರಂದು ಭಾನುವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದು, ಈ ನಡುವಲ್ಲೇ ಮೋದಿಯವರು ಪಾಲ್ಗೊಳ್ಳಬೇಕಿದ್ದ ರ್‍ಯಾಲಿ ಸ್ಥಳದಿಂದ 12 ಕಿಮೀ ದೂರದಲ್ಲಿ ಜಮ್ಮುವಿನ ಬಿಷ್ನಾಹ್‌ನ ಲಾಲಿಯನ್‌ ಗ್ರಾಮದ ಬಯಲು ಪ್ರದೇಶದಲ್ಲಿ ಭಾನುವಾರ ಬೆಳಗ್ಗೆ ಸ್ಫೋಟ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ. ಸ್ಫೋಟ ಸಂಭವಿಸುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಹಾಗೂ ಭದ್ರತಾ ಪಡೆಗಳು ಧಾವಿಸಿದ್ದು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಕೇಂದ್ರಾಡಳಿತ ಪ್ರದೇಶದ ಎರಡು ಪ್ರದೇಶಗಳ ನಡುವೆ ಸರ್ವಋತು ಸಂಪರ್ಕವನ್ನು ಸ್ಥಾಪಿಸಲು ಬನಿಹಾಲ್-ಖಾಜಿಗುಂಡ್ ರಸ್ತೆ ಸುರಂಗ ಮಾರ್ಗವನ್ನು ತೆರೆಯುವುದು ಸೇರಿದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ 20,000 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಎ.24 ರಂದು ನೆರವೇರಿಸಲಿದ್ದಾರೆ. ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಆಚರಣೆಯಲ್ಲಿ ಭಾಗವಹಿಸಲು ಮತ್ತು ದೇಶಾದ್ಯಂತ ಗ್ರಾಮ ಸಭೆಗಳನ್ನು ಉದ್ದೇಶಿಸಿ ಮಾತನಾಡಲು ಮೋದಿ ಕಾಶ್ಮೀರಕ್ಕೆ ಪ್ರಯಾಣಿಸುತ್ತಿದ್ದಾರೆ ಎಂದು ಪ್ರಧಾನಮಂತ್ರಿಗಳ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!