ಉಡುಪಿ : ಪ್ರತಿನಿತ್ಯ ಉಪಯೋಗಿಸುವ ಆಹಾರದಲ್ಲಿ ರಾಸಾಯನಿಕ ವಸ್ತುಗಳ ಹೆಚ್ಚಿನ ಬಳಕೆಯಿಂದ ಕ್ಯಾನ್ಸರ್ ಕಿಡ್ನಿರೋಗದಂತಹ ಮಾರಕ ಕಾಯಿಲೆಗಳು ಕಂಡುಬರುತ್ತಿದ್ದು ಸಾರ್ವಜನಿಕರು ತಮ್ಮ ಆರೋಗ್ಯದ ಕುರಿತಂತೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು. ಜಿಲ್ಲಾಡಳಿತ, ಜಿ.ಪಂ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಆಯುಷ್ ವಿಭಾಗ ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಕಾಶ್ಮೀರ ಆರೋಗ್ಯ 75 ವರ್ಷದ ಅಭಿಯಾನದಡಿ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಎ.23 ರಂದು ಶನಿವಾರ ನಡೆದ ಉಡುಪಿ ತಾಲೂಕು ಮಟ್ಟದ ಬೃಹತ್ ಆರೋಗ್ಯ ಮೇಳ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಕೆ. ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಕೂರ್ಮ ರಾವ್, ಜಿ.ಪಂ. ಸಿಇಒ ಡಾ. ನವೀನ್ ಭಟ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾ ಸರ್ಜನ್ ಡಾ. ಮಧುಸೂಧನ ನಾಯಕ್, ಆಯುಷ್ ವೈದ್ಯಾಧಿಕಾರಿ ಡಾ. ಸತೀಶ್ ಮತ್ತು ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಮಣ್ಯ ಶೇರಿಗಾರ್ ಉಪಸ್ಥಿತರಿದ್ದರು.
Recent Comments
ಕಗ್ಗದ ಸಂದೇಶ
on