Saturday, May 21, 2022
spot_img
Homeದೇಶ370 ನೇ ವಿಧಿ ರದ್ದು : ಬೇಸಿಗೆ ರಜೆ ನಂತರ ಸುಪ್ರೀಂ ಕೋರ್ಟ್ ವಿಚಾರಣೆ

370 ನೇ ವಿಧಿ ರದ್ದು : ಬೇಸಿಗೆ ರಜೆ ನಂತರ ಸುಪ್ರೀಂ ಕೋರ್ಟ್ ವಿಚಾರಣೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಬೇಸಿಗೆ ರಜೆಯ ನಂತರ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಎ.25ರಂದು ತಿಳಿಸಿದೆ.
ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸವಲತ್ತನ್ನು ಹಿಂತೆಗೆದುಕೊಂಡ ನಿರ್ಧಾರ ಕುರಿತು ಸಲ್ಲಿಸಲಾಗಿದ್ದ ಅರ್ಜಿಯನ್ನು ತುರ್ತು ವಿಚಾರಣೆಯ ಅಗತ್ಯವಿದೆ ಎಂದು ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಶೇಖರ್ ನಾಫಡೆ ಹೇಳಿದ್ದನ್ನು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ಗಮನಿಸಿತು. ಇದನ್ನು ಐವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ ವಿಚಾರಣೆ ಮಾಡಬೇಕಾಗಿದ್ದು ನ್ಯಾಯಪೀಠವನ್ನು ಪುನರ್ರಚನೆ ಮಾಡಬೇಕಾಗಿದೆ ಎಂದರು.
ಬೇಸಿಗೆ ರಜೆಯ ನಂತರ ಅರ್ಜಿಗಳನ್ನು ಆಲಿಸಲು ಐವರು ನ್ಯಾಯಾಧೀಶರ ಪೀಠವನ್ನು ಮರು ರಚನೆ ಮಾಡಲು ನ್ಯಾಯಾಲಯ ಒಪ್ಪಿಗೆ ನೀಡಿದ್ದು, ಜಮ್ಮು- ಕಾಶ್ಮೀರ ಮತ್ತು ಲಡಾಖ್ ಅನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಆರ್ಟಿಕಲ್ 370 ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019 ರ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸುವ ಹಲವಾರು ಅರ್ಜಿಗಳನ್ನು ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಸಂವಿಧಾನ ಪೀಠಕ್ಕೆ 2019 ರಲ್ಲಿ ಉಲ್ಲೇಖಿಸಲಾಗಿತ್ತು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!