ಬೆಂಗಳೂರು : ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಲು ರಾಜ್ಯ ಸರ್ಕಾರ ಯೋಜನೆ

ಬೆಂಗಳೂರು : ಮಣಿಪುರದ ಇಂಫಾಲ್ ನಲ್ಲಿರುವ ರಾಷ್ಟ್ರೀಯ ಕ್ರೀಡಾ ವಿಶ್ವವಿದ್ಯಾನಿಲಯದಂತೆ ಕೇಂದ್ರ ಸರ್ಕಾರದ ಅನುದಾನದಲ್ಲಿ ಬೆಂಗಳೂರಿನಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸುತ್ತಿದೆ. ಮೆಡಿಸಿನ್, ನ್ಯೂಟ್ರಿಷನ್ ಹಾಗೂ ಕೌನ್ಸೆಲಿಂಗ್ ಸೇರಿದಂತೆ ವಿವಿಧ ಕ್ರೀಡೆಗಳು ಮತ್ತು ಕ್ರೀಡಾ-ಸಂಬಂಧಿತ ಕೋರ್ಸ್‌ಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳನ್ನು ನೀಡುವ ಯೋಜನೆ ಇದಾಗಿದೆ. ವಿಶ್ವವಿದ್ಯಾನಿಲಯ ಸ್ಥಾಪಿಸಲು ಕ್ರೀಡಾ ಇಲಾಖೆಯು ನಗರದ ಹೊರವಲಯದ ಯಲಹಂಕದಲ್ಲಿ 100 ಎಕರೆ ಜಾಗವನ್ನು ಗುರುತಿಸಿದೆ. ಇದರಲ್ಲಿ 65 ಎಕರೆ ರಾಜ್ಯ ಸರ್ಕಾರಕ್ಕೆ ಸೇರಿದ್ದು ಉಳಿದ 35 ಎಕರೆ ಖಾಸಗಿ ಜಮೀನು ಸ್ವಾಧೀನಪಡಿಸಿಕೊಳ್ಳಬೇಕಿದೆ. ಕಂದಾಯ ಇಲಾಖೆಯು ಆದಷ್ಟು ಬೇಗ ಭೂಮಿಯನ್ನು ಕ್ರೀಡಾ ಇಲಾಖೆಗೆ ಹಸ್ತಾಂತರಿಸುವ ನಿರೀಕ್ಷೆಯಿದೆ. ಸ್ಥಳವು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿದ್ದು ಇದು ಎಲ್ಲರಿಗೂ ಅನುಕೂಲವಾಗಲಿದೆ. ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಸ್ಪಾಪಿಸಲಾಗುವುದು ಇದರಿಂದಾಗಿ ಭಾರತದಾದ್ಯಂತ ಕ್ರೀಡಾಪಟುಗಳು ಅಧ್ಯಯನ ಮತ್ತು ತರಬೇತಿ ಪಡೆಯಲು ಅನುಕೂಲವಾಗುತ್ತದೆ ಎಂದು ಕ್ರೀಡಾ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.

error: Content is protected !!
Scroll to Top