ಆತಂಕ ಪಡುವಷ್ಟು ಕೋವಿಡ್ ಕೇಸ್ ಹೆಚ್ಚಾಗಿಲ್ಲ : ಡಾ. ಕೆ. ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಆತಂಕಪಡುವಷ್ಟು ಕೋವಿಡ್ ಪ್ರಕರಣಗಳು ಹೆಚ್ಚಾಗಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು. ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ಕೋವಿಡ್ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ಇದೆ. ಈ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ನಾನು ಭಾಗಿಯಾಗುತ್ತೇನೆ ಎಂದರು.
ಗೃಹ ಕಚೇರಿ ಕೃಷ್ಣಾದಿಂದ ಇಬ್ಬರು ಭಾಗಿಯಾಗುತ್ತೇವೆ. ಸದ್ಯ ಆತಂಕ ಪಡುವ ಹಾಗೆ ಕೇಸ್ ಗಳು ಹೆಚ್ಚಾಗಿಲ್ಲ. ಇಂದಿನ ಸಭೆಯಲ್ಲಿ ಪ್ರಧಾನಿಗಳು ಯಾವ ಸಲಹೆ ಕೊಡುತ್ತಾರೆ ನೋಡೋಣ ಎಂದರು. ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ತಜ್ಞರ ಜೊತೆ ಈಗಾಗಲೇ ಸಭೆ ಮಾಡಿದ್ದೇವೆ. ಪ್ರಧಾನಿಗಳ ಸಭೆ ಬಳಿಕ ಏನು ತೀರ್ಮಾನ ಕೈಗೊಳ್ಳುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದರು.

error: Content is protected !!
Scroll to Top