ಬೆಂಗಳೂರು: ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್, ಸಾಗಾಣಿಕಾ ವೆಚ್ಚ ಸೇರಿದಂತೆ ಬಹುತೇಕ ಎಲ್ಲ ವೆಚ್ಚಗಳು ಶೇ.30 ರಷ್ಟು ಹೆಚ್ಚಾಗಿವೆ. ಇದನ್ನು ಪರಿಗಣಿಸಿ ರೈತರಿಗೆ ಹೆಚ್ಚುವರಿ ದರ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಹಾಲಿನ ದರವನ್ನು ಹೆಚ್ಚಳ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
ಅಮೂಲ್ ಸೇರಿದಂತೆ ದೇಶದ ವಿವಿಧ ಸಹಕಾರಿ ಮತ್ತು ಖಾಸಗಿ ಸಂಸ್ಥೆಗಳು ಹಾಲಿನ ಮಾರಾಟ ದರವನ್ನು ಹೆಚ್ಚಿಸಿವೆ. ನಂದಿನಿ ಹಾಲಿನ ಮಾರಾಟ ದರಕ್ಕೆ ಹೋಲಿಕೆ ಮಾಡಿದರೆ ಇತರೆ ಸಂಸ್ಥೆಗಳ ದರವು ಪ್ರತಿ ಲೀಟರ್ಗೆ 8ರಿಂದ 10 ರೂ. ಹೆಚ್ಚಿದೆ. ಹೀಗಾಗಿ ನಂದಿನಿ ಹಾಲಿನ ಮಾರಾಟ ದರವನ್ನು ಕನಿಷ್ಠ ಪ್ರತಿ ಲೀಟರ್ಗೆ 3 ರೂ. ಹೆಚ್ಚಿಸಲು ಕ್ರಮಕೈಗೊಳ್ಳಬೇಕು. ಇದರಿಂದ ಹಾಲು ಉತ್ಪಾದಕರಿಗೆ ಕನಿಷ್ಠ ರೂ. ಮತ್ತು ಹಾಲು ಉತ್ಪಾದಕರ ಸಹಕಾರಿ ಸಂಘ, ಹಾಲು ಒಕ್ಕೂಟ ಹಾಗೂ ಹಾಲು ಮಾರಾಟಗಾರರಿಗೆ ರೂ. ನೀಡಲು ಸಹಕಾರಿಯಾಗಲಿದೆ ಎಂದು ಪತ್ರ ಬರೆದು ಮುಖ್ಯಮಂತ್ರಿಯವರನ್ನು ಕೋರಿದ್ದಾರೆ.