ಬೆಂಗಳೂರು: ಬೆಂಗಳೂರಿನಲ್ಲಿ 22 ವರ್ಷದ ಯುವಕ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದು ನಿಜಕ್ಕೂ ದುರಾದೃಷ್ಟಕರ ಸಂಗತಿ. ಈಗಾಗಲೇ ಅಧಿಕಾರಿಗಳಿಗೆ ಈ ಸಂಬಂಧ ಮಾತುಕತೆ ನಡೆಸಿದ್ದು ತನಿಖೆ ನಡೆಸುವಂತೆ ಸೂಚಿಸಲಾಗಿದೆ. ಪ್ರಕರಣದಲ್ಲಿ ಅಧಿಕಾರಿಗಳ ತಪ್ಪುಗಳು ಕಂಡು ಬಂದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಈ ಅವಘಡ ಆಪ್ಟಿಕಲ್ ವೈರ್ ಅಥವಾ ವಿದ್ಯುತ್ ತಂತಿಯಿಂದ ಸಂಭವಿಸಿರುವುದೇ ಎಂಬ ಬಗ್ಗೆ ತನಿಖೆ ನಡೆಸಲು ಸೂಚನೆ ನೀಡಲಾಗಿದೆ. ಯುವಕನಿಗೆ ಇಂಧನ ಇಲಾಖೆಯ ಮಾರ್ಗಸೂಚಿಯಂತೆ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
Recent Comments
ಕಗ್ಗದ ಸಂದೇಶ
on