ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯ : ಕೂರ್ಮಾರಾವ್‌

ಉಡುಪಿ : ಜಿಲ್ಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಸಂಚಾರದ ಸಮಯದಲ್ಲಿ ಮಾಸ್ಕ್‌ ಕಡ್ಡಾಯವಾಗಿ ಧರಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ ಆದೇಶಿಸಿದ್ದಾರೆ.
ಪ್ರಸ್ತುತ ದೇಶದ ಕೆಲವು ರಾಜ್ಯಗಳಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿಯೂ ಕೂಡಾ ಕೋವಿಡ್‌ ಪಾಸಿಟಿವ್‌ ದರ ಏರಿಕೆಯಾಗುತ್ತಿದೆ. ಮುಂಜಾಗೃತ ಕ್ರಮವಾಗಿ ಮಾಸ್ಕ್‌ ಧಾರಣೆ ಅವಶ್ಯಕವೆಂದು ರಾಜ್ಯ ಕೋವಿಡ್‌ ಸಲಹಾ ಸಮಿತಿ ಸೂಚಿಸಿದೆ. ಆದ್ದರಿಂದ ಕನಿಷ್ಟ 2 ಅಡಿ ಸಾಮಾಜಿಕ ಅಂತರದೊಂದಿಗೆ ಮಾಸ್ಕ್‌ ಧರಿಸುವುದು ಕಡ್ಡಾಯ. ಅಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಶಿಕ್ಷಾರ್ಹ ಅಪರಾಧವಾಗಿದ್ದು ಇದನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.





























































































































































































































error: Content is protected !!
Scroll to Top