Thursday, May 19, 2022
spot_img
Homeರಾಜ್ಯಹಿಂದಿ ರಾಷ್ಟ್ರ ಭಾಷೆ ಎಂದು ಪರಿಗಣಿಸುವುದರಲ್ಲಿ ತಪ್ಪೇನೂ ಇಲ್ಲ: ಮುರುಗೇಶ್ ನಿರಾಣಿ

ಹಿಂದಿ ರಾಷ್ಟ್ರ ಭಾಷೆ ಎಂದು ಪರಿಗಣಿಸುವುದರಲ್ಲಿ ತಪ್ಪೇನೂ ಇಲ್ಲ: ಮುರುಗೇಶ್ ನಿರಾಣಿ

ಬೆಂಗಳೂರು : ಕನ್ನಡ ಭಾಷೆಯನ್ನೂ ನಾನೂ ಪ್ರೀತಿಸುತ್ತೇನೆ. ಆದರೆ, ಹಿಂದಿ ರಾಷ್ಟ್ರ ಭಾಷೆ ಎಂದು ಪರಿಗಣಿಸುವುದರಲ್ಲಿ ತಪ್ಪೇನೂ ಇಲ್ಲ ಎಂದು ಸಚಿವ ಮುರುಗೇಶ್ ನಿರಾಣಿಯವರು ಗುರುವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿಯನ್ನು ರಾಷ್ಟ್ರೀಯ ಭಾಷೆಯನ್ನಾಗಿ ಮಾಡಬೇಕು ಎಂಬ ಕೂಗು ಮೊದಲಿನಿಂದಲೂ ಇದೆ. ಇದರಲ್ಲಿ ಯಾವ ತಪ್ಪೂ ಇಲ್ಲ. ಹೆಚ್ಚು ಭಾಷೆ ಕಲಿತಷ್ಟೂ ನಮಗೇ ಅನುಕೂಲ. ನಾವು ಕನ್ನಡಿಗರು, ಹೀಗಾಗಿ ಕನ್ನಡಕ್ಕೆ ಮೊದಲ ಆದ್ಯತೆ. ಇಂಗ್ಲಿಷ್ ಸ್ಥಳೀಯ ಭಾಷೆಯಲ್ಲದಿದ್ದರೂ, ಹೊರ ದೇಶಗಳಲ್ಲಿ ಸಂವಹನ ನಡೆಸಲು ಇಂಗ್ಲಿಷ್ ಕಲಿಯಬೇಕಾಗಿದೆ. ಹೆಚ್ಚಿನ ಭಾಷೆಗಳನ್ನು ಕಲಿಯುವುದರಿಂದ ಸಂಸ್ಕೃತಿಯನ್ನು ಶ್ರೀಮಂತಗೊಳಿಸುತ್ತದೆ. ನಾನೂ ಕೂಡ ಗ್ರಾಮೀಣ ಭಾಗದವನಾಗಿರುವುದರಿಂದ ಕನ್ನಡವನ್ನು ಪ್ರೀತಿಸುತ್ತೇನೆ. ಹಿಂದಿ ಭಾಷೆ ಕಲಿಯುವದರಲ್ಲಿ ಯಾವ ತಪ್ಪೂ ಇಲ್ಲ. ಹಿಂದಿ ರಾಷ್ಟ್ರ ಭಾಷೆ ಎಂದು ಪರಿಗಣಿಸುವುದರಲ್ಲಿ ತಪ್ಪೇನೂ ಇಲ್ಲ ಎಂದು ಹೇಳಿದ್ದಾರೆ. 

ಬಳಿಕ ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಅವರು, ಇದು ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದೆ. ಸದ್ಯಕ್ಕೆ ನಮಗೆ ನೀಡಿರುವ ಜವಾಬ್ದಾರಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವುದು ನಮ್ಮ ಕರ್ತವ್ಯ ಎಂದು ಅಭಿಪ್ರಾಯಪಟ್ಟರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!