ಕಾರ್ಕಳ : ಆನೆಕೆರೆ ಶ್ರೀ ಕೃಷ್ಣ ಕ್ಷೇತ್ರದ ಪ್ರತಿಷ್ಠಾಪನೆಯ 14ನೇ ವರ್ಷದ ವರ್ಧಂತ್ಯುತ್ಸವ ಎ. 30ರಂದು ವಿಜೃಂಭಣೆಯಿಂದ ನೆರವೇರಿತು. ಆನಾಗಪಾತ್ರಿ ದಯಾನಂದ ಧರ್ಮದರ್ಶಿ ನಾಗದರ್ಶನ, ಬನ್ನಂಜೆ ಶ್ರೀ ಕೇಶವ ತಂತ್ರಿಯವರ ನೇತೃತ್ವದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕ ಸದಾನಂದ ಶಾಂತಿ ಮತ್ತು ಬಳಗದವರಿಂದ ವೈದಿಕ ಕಾರ್ಯ ನೆರವೇರಿತು. ಬಳಿಕ ಪ್ರಸಾದ ವಿತರಣೆ, ಮಧ್ಯಾಹ್ನ ಸಾರ್ವಜನಿಕ ಮಹಾ ಅನ್ನಸಂತರ್ಪಣೆ ಜರುಗಿತು.












