Saturday, May 21, 2022
spot_img
Homeರಾಜ್ಯರಾಜ್ಯದಲ್ಲಿ 60 ಯೋಜನೆಯ ಒಟ್ಟು ರೂ. 2465 ಕೋಟಿ ಹೂಡಿಕೆಯ ಪ್ರಸ್ತಾವನೆಗೆ ಅನುಮೋದನೆ

ರಾಜ್ಯದಲ್ಲಿ 60 ಯೋಜನೆಯ ಒಟ್ಟು ರೂ. 2465 ಕೋಟಿ ಹೂಡಿಕೆಯ ಪ್ರಸ್ತಾವನೆಗೆ ಅನುಮೋದನೆ

ಬೆಂಗಳೂರು : ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡಿರುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ರೂ.2,465.94 ಕೋಟಿ ಹೂಡಿಕೆಯ ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ಕರ್ನಾಟಕ ಉದ್ಯೋಗ ಮಿತ್ರ ಭವನದಲ್ಲಿ ನಡೆದ 131 ನೇ ರಾಜ್ಯಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಇ.ವಿ. ರಮಣರೆಡ್ಡಿ ಮತ್ತಿತರರು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಒಟ್ಟು 60 ಯೋಜನೆಗಳಿಂದ ರೂ. 2,465.94 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಇದರಿಂದ 8,575 ಉದ್ಯೋಗಗಳು ಸೃಜನೆಯಾಗಲಿವೆ. ಇದರಲ್ಲಿ ರೂ. 50 ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆಯ 10 ಪ್ರಮುಖ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಅಂದಾಜು ರೂ. 1,522. 33 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು 3,190 ಜನರಿಗೆ ಉದ್ಯೋಗ ಲಭಿಸಲಿದೆ. ರೂ. 15 ಕೋಟಿಯಿಂದ 50 ಕೋಟಿ ರೂ.ವರೆಗಿನ 49 ಯೋಜನೆಗೆ ಇಲಾಖೆ ಒಪ್ಪಿಗೆ ಕೊಟ್ಟಿದೆ. ಒಟ್ಟು 938.61 ಕೋಟಿ ಹೂಡಿಕೆಯಾಗಲಿದ್ದು 5,385 ಜನರಿಗೆ ಉದ್ಯೋಗ ಲಭಿಸಲಿದೆ. ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಮುಂದೆ ಬರುವ ಉದ್ಯಮಿಗಳಿಗೆ ಅಗತ್ಯವಿರುವ ಭೂಮಿ, ನೀರು, ರಸ್ತೆ ಹಾಗೂ ವಿದ್ಯುತ್ ಸೇರಿದಂತೆ ವಿಶ್ವದರ್ಜೆಯ ಮೂಲಭೂತ ಸೌಕರ್ಯಗಳನ್ನು ಕಾಲಮಿತಿಯೊಳಗೆ ಒದಗಿಸಲು ಇಲಾಖೆ ಬದ್ಧವಾಗಿದೆ ಎಂದು ನಿರಾಣಿ ಭರವಸೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!