ಚಿತ್ರದುರ್ಗ : ಮುರುಘಾ ಮಠದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ʼಬಸವಶ್ರೀʼ ಪ್ರಶಸ್ತಿ ಈ ಬಾರಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಲಭಿಸಿದ್ದು, ಮೇ. 3ರಂದು ಬಸವಜಯಂತಿ ಪ್ರಯುಕ್ತ ಅನುಭವ ಮಂಟಪದಲ್ಲಿ ಪುನೀತ್ ಪತ್ನಿ ಅಶ್ವಿನಿ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಡಾ. ಶಿವಮೂರ್ತಿ ಮುರುಘಾ ಶರಣರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ, ಕೃಷಿ ಸಚಿವ ಬಿ.ಸಿ ಪಾಟೀಲ್, ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ, ನಟ ಶಿವ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.