Thursday, May 26, 2022
spot_img
Homeವಿದೇಶಕಾಬುಲ್ ಮಹಿಳೆಯರ ಚಾಲನಾ ಪರವಾನಗಿ ರದ್ದು : ತಾಲಿಬಾನ್​

ಕಾಬುಲ್ ಮಹಿಳೆಯರ ಚಾಲನಾ ಪರವಾನಗಿ ರದ್ದು : ತಾಲಿಬಾನ್​

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಪ್ರಜಾಪ್ರಭುತ್ವ ಸರ್ಕಾರವನ್ನು ಕೆಡವಿ ಅಧಿಕಾರಕ್ಕೆ ಬಂದಿರುವ ತಾಲಿಬಾನ್ ಸರ್ಕಾರ, ಕಾಬೂಲ್ ಮತ್ತು ಇತರ ಪ್ರಾಂತ್ಯಗಳಲ್ಲಿ ಮಹಿಳೆಯರಿಗೆ ಚಾಲನಾ ಪರವಾನಗಿ ನೀಡುವುದನ್ನು ನಿಷೇಧಿಸಿದೆ ಎಂದು ತಿಳಿದುಬಂದಿದೆ.
ಈ ಹಿಂದೆ ಮಹಿಳೆಯರಿಗೆ ಆರನೇ ತರಗತಿಗಿಂತ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಹೋಗುವುದನ್ನು ನಿಷೇಧಿಸಿತ್ತು. ಇದು ವಿಶ್ವಾದ್ಯಂತ ಖಂಡನೆಗೆ ಕಾರಣವಾಗಿತ್ತು. ಶಿಕ್ಷಕರ ಕೊರತೆಯ ಕಾರಣ ಈ ನೀತಿ ಜಾರಿ ಮಾಡಿದ್ದು, ಹೆಚ್ಚಿನ ವಿದ್ಯಾಭ್ಯಾಸ ಮಾಡಲು ಬಯಸುವ ಹೆಣ್ಣುಮಕ್ಕಳಿಗೆ ಅವಕಾಶ ನೀಡಲಾಗುವುದು ಎಂದು ಸರ್ಕಾರ ತಿಳಿಸಿತ್ತು. ಇದೀಗ ಮಹಿಳೆಯರಿಗೆ ನೀಡಲಾಗುವ ಚಾಲನಾ ಪರವಾನಗಿ ನೀಡುವುದನ್ನು ನಿಲ್ಲಿಸಿದೆ. ತಾಲಿಬಾನ್​ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಮುಂದುವರಿದಿದ್ದು, ಮಹಿಳೆಯರ ವಿರುದ್ಧ ಉಗ್ರವಾದಿ ಸರ್ಕಾರ ಇನ್ನಿಲ್ಲದ ನಿಯಮಗಳನ್ನು ಜಾರಿ ಮಾಡುತ್ತಲೇ ಇದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!