ಕಾರ್ಕಳ : ವ್ಯಕ್ತಿ ಆತ್ಮಹತ್ಯೆ

ಕಾರ್ಕಳ : ಮದ್ಯಪಾನದೊಂದಿಗೆ ವಿಷ ಬೆರೆಸಿ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ನಗರದ ಭವಾನಿಮಿಲ್ ಬಳಿ ಮೇ. 4ರಂದು ನಡೆದಿದೆ. ಶಂಕರ ಸುವರ್ಣ (51) ಎಂಬವರೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮದ್ಯ ವ್ಯಸನಿಯಾಗಿದ್ದ ಅವರು ಯಾವುದೋ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎನ್ನಲಾಗಿದೆ. ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.





































































error: Content is protected !!
Scroll to Top