ಬೆಂಗಳೂರು: ಶೂಟಿಂಗ್ ಮುಗಿಸಿ ಮನೆಗೆ ತೆರಳುತ್ತಿದ್ದ ಜನಪ್ರಿಯ ಹಾಸ್ಯ ನಟಿ ಸುನೇತ್ರಾ ಪಂಡಿತ್ ಅವರ ದ್ವಿಚಕ್ರ ವಾಹನ ಅಪಘಾತಕ್ಕೀಡಾಗಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. ಶನಿವಾರ ಮೇ 7 ತಡರಾತ್ರಿ ಶೂಟಿಂಗ್ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಸುನೇತ್ರಾ ಪಂಡಿತ್ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಎನ್.ಆರ್. ಕಾಲೋನಿಯ 9ನೇ ಅಡ್ಡರಸ್ತೆಯಲ್ಲಿ ಅವೈಜ್ಞಾನಿಕ ಹಂಪ್ ಮತ್ತು ರಸ್ತೆ ಗುಂಡಿ ಕಾರಣದಿಂದ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ರಸ್ತೆ ಅಪಘಾತದಲ್ಲಿ ಹಾಸ್ಯ ನಟಿ ಸುನೇತ್ರಾ ಪಂಡಿತ್ ಗಂಭೀರ ಗಾಯ : ಆಸ್ಪತ್ರೆಗೆ ದಾಖಲು















































