ನೂತನ ಮಾರ್ಗಸೂಚಿಗಳನ್ನು ಹೊರಡಿಸಿದ ಭಾರತೀಯ ರೈಲ್ವೆ

ನವದೆಹಲಿ : ರೈಲ್ವೆ ಪ್ರಯಾಣಿಕರು ರಾತ್ರಿ ಪ್ರಯಾಣದ ಸಂದರ್ಭದಲ್ಲಿ ಮೊಬೈಲ್‌ನಲ್ಲಿ ಏರಿದ ಧ್ವನಿಯಲ್ಲಿ ಮಾತನಾಡುವುದನ್ನು ಅಥವಾ ‘ಲೌಡ್ ಸ್ಪೀಕರ್’ನಲ್ಲಿ ಸಂಗೀತ ಕೇಳುವುದನ್ನು ಭಾರತೀಯ ರೈಲ್ವೆ ನಿಷೇಧಿಸಿದೆ.
ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ಖಾತರಿಪಡಿಸುವ ಉದ್ದೇಶದಿಂದ ಭಾರತೀಯ ರೈಲ್ವೆ ಹೊಸದಾಗಿ ಪ್ರಯಾಣಿಕ ಸ್ನೇಹಿ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅದರ ಪ್ರಕಾರ, ಪ್ರಯಾಣಿಕರು ದೂರು ನೀಡಿದರೆ, ಆ ಸಮಸ್ಯೆ ಪರಿಹರಿಸುವ ಜವಾಬ್ದಾರಿ ರೈಲಿನಲ್ಲಿರುವ ಸಿಬ್ಬಂದಿಯದ್ದಾಗಿರುತ್ತದೆ.
ರಾತ್ರಿ 10 ಗಂಟೆಯ ನಂತರ ಪ್ರಯಾಣಿಕರು ಮೊಬೈಲ್‌ನಲ್ಲಿ ಗಟ್ಟಿ ಧ್ವನಿಯಲ್ಲಿ ಮಾತನಾಡುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ರೈಲ್ವೆ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.





























































































error: Content is protected !!
Scroll to Top