ಆರ್ಥಿಕ ಬಿಕ್ಕಟ್ಟು ಪರಿಹರಿಸುವ ಪ್ರತಿಜ್ಞೆ ಮಾಡಿದ ಶ್ರೀಲಂಕಾ ಅಧ್ಯಕ್ಷ – ರಾಜಪಕ್ಸೆ

ಕೊಲಂಬೊ: ಭೀಕರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಲಂಕೆಯಲ್ಲಿ ಹಿಂಸಾಚಾರ ಇದೀಗ ತೀವ್ರ ಸ್ವರೂಪಕ್ಕೆ ತಿರುಗಿದ್ದು ಸತ್ತವರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಹಿಂಸಾಚಾರ ಮತ್ತು ಸೇಡಿನ ಕೃತ್ಯಗಳನ್ನು ನಿಲ್ಲಿಸುವಂತೆ ಪ್ರಜೆಗಳಿಗೆ ಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ಒತ್ತಾಯಿಸಿದ್ದು ರಾಷ್ಟ್ರ ಎದುರಿಸುತ್ತಿರುವ ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸುವ ಪ್ರತಿಜ್ಞೆ ಮಾಡಿದ್ದಾರೆ. ಸಾಂವಿಧಾನಿಕವಾಗಿ ಮತ್ತು ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಒಮ್ಮತದ ಮೂಲಕ ರಾಜಕೀಯ ಸ್ಥಿರತೆಯನ್ನು ಪುನಃಸ್ಥಾಪಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಗೋತಬಯ ಟ್ವೀಟ್ ಮಾಡಿದ್ದಾರೆ. ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರ ಬೆಂಬಲಿಗರು ಸರ್ಕಾರಿ ವಿರೋಧಿ ಪ್ರತಿಭಟನಾಕಾರರ ಮೇಲೆ ದಾಳಿ ಮಾಡಿದ ನಂತರ ಹಿಂಸಾಚಾರ ತೀವ್ರ ಸ್ವರೂಪಕ್ಕೆ ತಿರುಗಿದೆ. ಕೊಲಂಬೊ ಮತ್ತು ದೇಶದ ಇತರ ಭಾಗಗಳಲ್ಲಿ ನಡೆದ ಹಿಂಸಾಚಾರದಲ್ಲಿ ಸುಮಾರು 250 ಜನರು ಗಾಯಗೊಂಡಿದ್ದಾರೆ. ಭೀಕರ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಆಡಳಿತಾರೂಢ ಸರ್ಕಾರದ ವಿರುದ್ಧ ಅಸಹನೆ ಹೆಚ್ಚಾಗುತ್ತಿದ್ದು ರಾಜಪಕ್ಸೆ ಕುಟುಂಬಕ್ಕೆ ಸೇರಿದ ಪೂರ್ವಜರ ಮನೆಯನ್ನು ಪ್ರತಿಭಟನಾಕಾರರ ಗುಂಪು ಸುಟ್ಟು ಹಾಕಿದ್ದು ರಾಷ್ಟ್ರದಾದ್ಯಂತ ಕರ್ಫ್ಯೂ ಜಾರಿ ಮಾಡಲಾಗಿದೆ.





























































































































































































































error: Content is protected !!
Scroll to Top