ಕಾರ್ಕಳ : 6ನೇ ಯಕ್ಷರಂಗಾಯಣ ಕಾರ್ಕಳದಲ್ಲಿ ಸ್ಥಾಪನೆಯಾಗುತ್ತಿದ್ದು, ಕಟ್ಟಡ ನಿರ್ಮಾಣಕ್ಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ 5 ಕೋಟಿ ರೂ. ಅನುದಾನ ಮಂಜೂರು ಮಾಡಿದೆ. ಅದರಲ್ಲಿ ಈಗಾಗಲೇ 2 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದರು.
ಅವರು ಮೇ 11ರಂದು ಕೋಟಿ ಚೆನ್ನಯ ಥೀಮ್ ಪಾರ್ಕ್‌ನಲ್ಲಿ ಯಕ್ಷರಂಗಾಯಣ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದರು. ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ಯಕ್ಷರಂಗಾಯಣದ ವೀಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ಪುರಸಭೆ ಅಧ್ಯಕ್ಷೆ ಸುಮಾಕೇಶವ್, ಯಕ್ಷರಂಗಾಯಣ ನಿರ್ದೇಶಕ ಜೀವನ್ ರಾಂ ಸುಳ್ಯ ಉಪಸ್ಥಿತರಿದ್ದರು.ಬಳಿಕ ಸಚಿವರು ಚಿಣ್ಣರ ಮೇಳದಲ್ಲಿ ಭಾಗವಹಿಸಿದ ಮಕ್ಕಳೊಂದಿಗೆ ಫೋಟೋ ಕ್ಲಿಕ್ಕಿಸಿ ಸಂಭ್ರಮಿಸಿದರು.































































