ಬೆಂಗಳೂರು : ದೇಶಾದ್ಯಂತ ಇರುವ ಕರ್ನಾಟಕ ಬ್ಯಾಂಕ್ ಮತ್ತು ಪ್ರಮುಖ ಕೇಂದ್ರಗಳಲ್ಲಿ ಖಾಲಿ ಇರುವ ಗುಮಾಸ್ತ (Clerk) ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ.
ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮೇ. 21ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು https://www.karnatakabank.com/ ಗೆ ಭೇಟಿ ನೀಡಲು ಕೋರಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ : ಕರ್ನಾಟಕ ಬ್ಯಾಂಕ್ನಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕಡ್ಡಾಯವಾಗಿ ಕನಿಷ್ಠ 60% ನೊಂದಿಗೆ ಪದವಿ ಪಾಸಾಗಿರಬೇಕು.
ವಯೋಮಿತಿ : ಅಭ್ಯರ್ಥಿಗಳು ಗರಿಷ್ಠ 26 ವರ್ಷ ವಯೋಮಿತಿ ಹೊಂದಿರಬೇಕು. ಎಸ್ಸಿ ಎಸ್ಟಿ ಅಭ್ಯರ್ಥಿಗಳು ಗರಿಷ್ಠ 31 ವರ್ಷಗಳ ವಯೋಮಿತಿ ಹೊಂದಿರಬೇಕು.
ಅರ್ಜಿ ಶುಲ್ಕ : ಕ್ಲರ್ಕ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ₹700 ಅರ್ಜಿ ಶುಲ್ಕ ಪಾವತಿಸಬೇಕು. SC/ST ಅಭ್ಯರ್ಥಿಗಳು ₹600 ಅರ್ಜಿ ಶುಲ್ಕ ಪಾವತಿಸಬೇಕು.
ಅಗತ್ಯವಿರುವ ದಾಖಲೆಗಳು : ಫೋಟೋ, ಅಂಕಪಟ್ಟಿಗಳು, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ, ಕನ್ನಡ ಮಾದ್ಯಮ ಪ್ರಮಾಣ ಪತ್ರ.
ಆಯ್ಕೆ ಪ್ರಕ್ರಿಯೆ : ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಜೂನ್ 2022 ರಲ್ಲಿ ಬೆಂಗಳೂರು, ಧಾರವಾಡ, ಹುಬ್ಬಳ್ಳಿ, ಮಂಗಳೂರು, ಮುಂಬೈ, ಮೈಸೂರು, ನವದೆಹಲಿ ಮತ್ತು ಶಿವಮೊಗ್ಗ ಕೇಂದ್ರಗಳಲ್ಲಿ ತಾತ್ಕಾಲಿಕವಾಗಿ ನಿಗದಿಪಡಿಸಲಾದ ಆನ್ಲೈನ್ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವೇತನ ವಿವರ : ಕರ್ನಾಟಕ ಬ್ಯಾಂಕ್ನಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹43,000 ವೇತನ ದೊರೆಯಲಿದೆ.