Thursday, May 26, 2022
spot_img
Homeದೇಶಅಕ್ರಮ ಹಣ ವರ್ಗಾವಣೆ: ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಬಂಧನ

ಅಕ್ರಮ ಹಣ ವರ್ಗಾವಣೆ: ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಬಂಧನ

ರಾಂಚಿ: ಮನಿ ಲಾಂಡರಿಂಗ್ ಪ್ರಕರಣದಲ್ಲಿ ಇತರ ಆರೋಪಗಳ ಜೊತೆಗೆ ನರೇಗಾ ನಿಧಿಯನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಜಾರ್ಖಂಡ್ ಗಣಿ ಕಾರ್ಯದರ್ಶಿ ಪೂಜಾ ಸಿಂಘಾಲ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ. 

15 ಗಂಟೆಗಳ ಕಾಲ ಸುದೀರ್ಘ ವಿಚಾರಣೆಯ ಬಳಿಕ ಅಂತಿಮವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು 2000 ಬ್ಯಾಚ್‌ನ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ರನ್ನು ಪಿಎಂಎಲ್ಎ ಸೆಕ್ಷನ್ ಅಡಿಯಲ್ಲಿ ಬಂಧಿಸಿದೆ. ಪೂಜಾ ಸಿಂಘಾಲ್‌ಗೆ ಸಂಬಂಧಿಸಿದ ಚಾರ್ಟರ್ಡ್ ಅಕೌಂಟೆಂಟ್ ಸುಮನ್ ಕುಮಾರ್ ಅವರನ್ನು ಮೂರು ದಿನಗಳ ಹಿಂದೆ ಬಂಧಿಸಲಾಗಿತ್ತು.

ವಿಚಾರಣೆ ಸಮಯದಲ್ಲಿ ಇಡಿ ಕೇಳಿದ ಪ್ರಶ್ನೆಗಳಿಗೆ ಪೂಜಾ ಹಾರಿಕೆ ಉತ್ತರ ನೀಡಿದ್ದರಿಂದ ಆಕೆಯನ್ನು ಬಂಧಿಸಲಾಗಿದೆ ಎಂದು ಇಡಿ ಮೂಲಗಳು ತಿಳಿಸಿವೆ. ಪೂಜಾರ ಪತಿ ಅಭಿಷೇಕ್ ಝಾ ಅವರಿಗೆ ಸಮನ್ಸ್ ನೀಡಿದ್ದು ಇಡಿ ಕಚೇರಿಗೆ ಆಗಮಿಸಿದ ಒಂದು ಗಂಟೆಯ ನಂತರ ಅವರನ್ನು ಅಧಿಕೃತವಾಗಿ ಬಂಧಿಸಲಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!