Thursday, May 26, 2022
spot_img
Homeರಾಜ್ಯಮೆ.19 ರಂದು ಎಸ್‌.ಎಸ್‌.ಎಲ್‌.ಸಿ ಫಲಿತಾಂಶ - ಬಿ.ಸಿ.ನಾಗೇಶ್

ಮೆ.19 ರಂದು ಎಸ್‌.ಎಸ್‌.ಎಲ್‌.ಸಿ ಫಲಿತಾಂಶ – ಬಿ.ಸಿ.ನಾಗೇಶ್

ಬೆಂಗಳೂರು : ಮೇ 19 ರಂದು ಎಸ್‌.ಎಸ್.ಎಲ್‌.ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮಾ.28 ರಿಂದ ಏ.11 ರವರಗೆ 2022 ನೇ ಸಾಲಿನ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆ ನಡೆದಿತ್ತು. ರಾಜ್ಯದಲ್ಲಿ ಒಟ್ಟು ಪರೀಕ್ಷೆಗೆ 15,387 ಶಾಲೆಗಳಿಂದ 8,73,884 ವಿದ್ಯಾರ್ಥಿಗಳು ನೋಂದಾಯಿಸಿಕೊಂಡು ಅದರಲ್ಲಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು ಮತ್ತು 4 ತೃತೀಯ ಲಿಂಗಿ ವಿದ್ಯಾರ್ಥಿಗಳು. ಅಲ್ಲದೆ ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಮೇ 15 ರಂದು ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಈ ಹಿಂದೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿತ್ತು. ಈಗಾಗಲೇ ಮೌಲ್ಯಮಾಪನ ಪ್ರಕ್ರಿಯೆ ಮುಗಿದಿದ್ದು ಅಂಕಗಳ ದಾಖಲೀಕರಣ ಪೂರ್ಣಗೊಳಿಸಿ ಮೇ 19 ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!