ಪರಿಶಿಷ್ಟ ಜಾತಿ, ಪಂಗಡದ ಬಿಪಿಎಲ್‌ ಗ್ರಾಹಕರಿಗೆ ಉಚಿತ ವಿದ್ಯುತ್‌

ಕಾರ್ಕಳ : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಬಿಪಿಎಲ್ ಕುಟುಂಬಗಳಿಗೆ ದೊರೆಯುತ್ತಿದ್ದ 40 ಯೂನಿಟ್‌ ಉಚಿತ ವಿದ್ಯುತ್ ಪ್ರಮಾಣವನ್ನು 75 ಯೂನಿಟ್ ಗೆ ಹೆಚ್ಚಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರಕಾರ ತೆಗೆದುಕೊಂಡಿದೆ ಎಂದು ಇಂಧನ ಸಚಿವ ವಿ. ಸುನೀಲ್‌ ಕುಮಾರ್‌ ತಿಳಿಸಿದ್ದಾರೆ.
ಮಾಜಿ ಉಪ ಪ್ರಧಾನಿ ದಿ. ಬಾಬು ಜಗಜೀವನ್ ರಾಂ ಅವರ ೧೧೫ ಜಯಂತಿ ಸಮಾರಂಭದಲ್ಲಿ ಗ್ರಾಮೀಣ ಪ್ರದೇಶದ ಭಾಗ್ಯ ಜ್ಯೋತಿ. ಕುಟಿರ ಜ್ಯೋತಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಹಾಗೂ ಪಂಗಡದ ಕುಟುಂಬಗಳಿಗೆ ಹಾಲಿ ಉಚಿತವಾಗಿ ನೀಡುತ್ತಿದ್ದ 40 ಯೂನಿಟ್ ವಿದ್ಯುತ್ ಅನ್ನು 75 ಯೂನಿಟ್‌ಗೆ ಹೆಚ್ಚಿಸಲಾಗುವುದು ಎಂದು ಎ. 5 ರಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಇಂಧನ ಇಲಾಖೆಗೆ ಕಡತ ರವಾನೆಯಾಗಿತ್ತು. ತಕ್ಷಣ ಸ್ಪಂದಿಸಿರುವ ಇಂಧನ ಸಚಿವ ಸುನೀಲ್ ಕುಮಾರ್ ಉಚಿತ ವಿದ್ಯುತ್ ಪ್ರಮಾಣ ಹೆಚ್ಚಳಕ್ಕೆ ಸೂಚಿಸಿದ್ದು, ಇದೀಗ ಇಂಧನ ಇಲಾಖೆ ಕೇವಲ ಒಂದು ತಿಂಗಳ ಅವಧಿಯಲ್ಲೇ ಕ್ರಮ ಕೈಗೊಂಡಿದೆ.

979 ಕೋಟಿ ರೂ. ಸಬ್ಸಿಡಿ
ಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬವಾಗಬಾರದೆಂಬ ನಿಟ್ಟಿನಲ್ಲಿ ಒಂದೇ ತಿಂಗಳಲ್ಲಿ ಪೂರಕ ಕ್ರಮ ಕೈಗೊಳ್ಳಲಾಗಿದೆ. ಪರಿಶಿಷ್ಟ ಜಾತಿಯ ಗ್ರಾಹಕರಿಗೆ 694.15 ಕೋಟಿ ರೂ, ಪರಿಶಿಷ್ಟ ಪಂಗಡದ ಗ್ರಾಹಕರಿಗೆ 285.42 ಕೋಟಿ ರೂ. ಸೇರಿದಂತೆ 979 ಕೋಟಿ ರೂ. ಅನ್ನು ಸಬ್ಸಿಡಿ ರೂಪದಲ್ಲಿ ಇಂಧನ ಇಲಾಖೆ ನೀಡಲಿದೆ.
ಸುನೀಲ್‌ ಕುಮಾರ್‌
ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು









































































































































































error: Content is protected !!
Scroll to Top