ಬೆಂಗಳೂರು : ವಿಧಾನಸಭೆಯಿಂದ ವಿಧಾನ ಪರಿಷತ್ ಏಳು ಸ್ಥಾನಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಈ ಪ್ರಸ್ತಾವನೆಗೆ ಬಿಜೆಪಿ ಕೋರ್ ಕಮಿಟಿ ಮೇ. 14ರಂದು ಸಮ್ಮತಿ ನೀಡಿದೆ.
ಬಿಜೆಪಿ ರಾಜ್ಯ ಘಟಕದ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಘಟಕದ ಅದ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಂಡಿದ್ದರು.
ವಿಧಾನ ಪರಿಷತ್ನ ಏಳು ಸ್ಥಾನ, ರಾಜ್ಯ ಸಭೆಯ ನಾಲ್ಕು ಸ್ಥಾನಗಳ ಚುನಾವಣೆ ಸಂಭವನೀಯ ಅಭ್ಯರ್ಥಿಗಳ ಕುರಿತು ನಡೆದ ಚರ್ಚೆಯಲ್ಲಿ ಹಲವರು ವಿಜಯೇಂದ್ರ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡುವ ಕುರಿತು ಪ್ರಸ್ತಾಪಿಸಿದ್ದು, ಎಲ್ಲರೂ ಒಪ್ಪಿಗೆ ಸೂಚಿಸಿದರು. ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ನಾಲ್ಕು ಸ್ಥಾನಗಳು ದೊರಕಲಿದ್ದು, ಉಳಿದ ಮೂರು ಸ್ಥಾನಗಳಿಗೆ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸಲಾಗಿದೆ ಎಂದು ತಿಳಿದುಬಂದಿದೆ.
ರಾಜ್ಯಸಬೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಮೊದಲನೆಯದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಎರಡನೇ ಸ್ಥಾನದಲ್ಲಿ ಹಾಲಿ ಸದಸ್ಯ ಕೆ.ಸಿ. ರಾಮಮೂರ್ತಿ ಅವರು ಪುನರ್ ಆಯ್ಕೆಯಾಗುವ ಸಾಧ್ಯತೆ ಹೆಚ್ಚಾಗಿದ್ದು, ಇನ್ನು ಕೆಲವರ ಹೆಸರುಗಳಿರುವ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಮುಖರ ಸಮಿತಿ ಅಂತಿಮಗೊಳಿಸಿದೆ ಎಂದು ತಿಳಿದುಬಂದಿದೆ.
ಬಿ.ವೈ. ವಿಜಯೇಂದ್ರ ವಿಧಾನ ಪರಿಷತ್ಗೆ : ಬಿಜೆಪಿ ಕೋರ್ ಸಮಿತಿ ಸಮ್ಮತಿ
Recent Comments
ಕಗ್ಗದ ಸಂದೇಶ
on