ನವದೆಹಲಿ : ರಾಜಧಾನಿ ನವದೆಹಲಿಯ ಮೂರು ಮಹಡಿಯ ವಾಣಿಜ್ಯ ಕಟ್ಟಡವೊಂದರಲ್ಲಿ ಮೇ. 13 ರಂದು ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 27 ಮಂದಿ ಸಜೀವ ದಹನವಾಗಿದ್ದು ದುರ್ಘಟನೆಯಲ್ಲಿ ಹಲವರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ. ನಿನ್ನೆ ಸಂಜೆ ನಡೆದ ಅಗ್ನಿಅವಘಡದಲ್ಲಿ ಈವರೆಗೂ ಕಟ್ಟಡದಿಂದ 27 ಶವಗಳನ್ನು ಹೊರತೆಗೆಯಲಾಗಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಇದೀಗ ಸ್ಥಳದಲ್ಲಿ ಅಗ್ನಿ ನಿಯಂತ್ರಣಕ್ಕೆ ಬಂದಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಕ್ಷಣಾ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಕೂಡ ಸ್ಥಳಕ್ಕೆ ಆಗಮಿಸಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಈ ಕಟ್ಟಡವು ನಾಲ್ಕು ಅಂತಸ್ತಿನ ವಾಣಿಜ್ಯ ಕಟ್ಟಡವಾಗಿದ್ದು, ಕಂಪನಿಗಳಿಗೆ ಕಚೇರಿ ಸ್ಥಳವನ್ನು ಒದಗಿಸಲಾಗಿತ್ತು. ಸಿಸಿಟಿವಿ ಕ್ಯಾಮೆರಾಗಳು ಮತ್ತು ರೂಟರ್ ತಯಾರಿಕಾ ಕಂಪನಿಯ ಕಚೇರಿ ಮೊದಲನೇ ಮಹಡಿಯಲ್ಲಿದ್ದು ಆ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆ ಸಂಬಂಧ ಇದೀಗ ಕಂಪನಿಯ ಮಾಲೀಕರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Recent Comments
ಕಗ್ಗದ ಸಂದೇಶ
on